alex Certify
ಕನ್ನಡ ದುನಿಯಾ       Mobile App
       

Kannada Duniya

100 CC ದ್ವಿಚಕ್ರವಾಹನ : ಸರ್ಕಾರಕ್ಕೆ ನೋಟಿಸ್

ಬೆಂಗಳೂರು: 100 ಸಿ.ಸಿ. ಸಾಮರ್ಥ್ಯದ ದ್ವಿಚಕ್ರವಾಹನಗಳಿಗೆ ಹಿಂಬದಿ ಸೀಟ್ ಅಳವಡಿಸದಂತೆ ಸೂಚನೆ ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಲಾಗಿದೆ.

ಟಿ.ವಿ.ಎಸ್. ಮೋಟಾರ್ ಕಂಪನಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ಏಕ ಸದಸ್ಯ ಪೀಠ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಮಧ್ಯಂತರ ತಡೆಯಾಜ್ಞೆ ನೀಡುವ ಕುರಿತು ನವೆಂಬರ್ 3 ರಂದು ವಿಚಾರಣೆ ನಡೆಯಲಿದೆ.

ಬೆಂಗಳೂರು ನಗರದ ರಸ್ತೆಗಳಲ್ಲಿ ಗುಂಡಿಗಳಿದ್ದು, ಇದರಿಂದಾಗಿ ಅನೇಕ ದ್ವಿಚಕ್ರವಾಹನ ಸವಾರರು ಸಾವನ್ನಪ್ಪಿದ್ದಾರೆ. ಈ ಹಿನ್ನಲೆಯಲ್ಲಿ ಸರ್ಕಾರ ಹಿಂಬದಿ ಸವಾರರಿಗೆ ನಿರ್ಬಂಧ ಹೇರಿರಬಹುದೆಂದು ನ್ಯಾ. ಬಿ.ವಿ. ನಾಗರತ್ನ ಅರ್ಜಿಯ ವಿಚಾರಣೆ ವೇಳೆ ಅಭಿಪ್ರಾಯಪಟ್ಟಿದ್ದಾರೆ.

100 ಸಿ.ಸಿ. ಒಳಗಿನ ದ್ವಿಚಕ್ರ ವಾಹನಗಳಿಗೆ ಹಿಂಬದಿ ಸೀಟ್ ಅಳವಡಿಸದಂತೆ ಸರ್ಕಾರ ಸೂಚಿಸಿದ್ದು, ಹಿಂಬದಿ ಸವಾರರಿಗೆ ಅವಕಾಶ ಇರುವ ವಾಹನಗಳ ನೋಂದಣಿಗೆ ನಿರ್ಬಂಧ ಹೇರಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...