alex Certify
ಕನ್ನಡ ದುನಿಯಾ       Mobile App
       

Kannada Duniya

ಕೆಸರಿನಲ್ಲೇ ಬೈಕ್ ಓಡಿಸಿದ ಇಂಜಿನಿಯರ್, ಕಾರಣ ಗೊತ್ತಾ..?

byke hhr

ಶಿವಮೊಗ್ಗ ಜಿಲ್ಲೆಯ ಗ್ರಾಮವೊಂದರ ಜನರಿಗೆ, ಜಮೀನುಗಳಿಗೆ ಹೋಗಲು ಇದ್ದ ರಸ್ತೆ, ಸಂಪೂರ್ಣ ಹಾಳಾಗಿದ್ದು, ಕೆಸರು ಗದ್ದೆಯಂತಾಗಿದ್ದ ರಸ್ತೆಯಲ್ಲಿ ಸಂಚರಿಸುವುದೇ ಯಾತನೆಯಾಗಿತ್ತು. ಇದನ್ನು ಸರಿಪಡಿಸುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಸಂಬಂಧಿಸಿದವರು ಸ್ಪಂದಿಸಿರಲಿಲ್ಲ.

ಕಾಮಗಾರಿ ನಡೆಸಲು ನಿರ್ಲಕ್ಷ್ಯ ವಹಿಸಿದ ಇಂಜಿನಿಯರ್ ನನ್ನು ಸ್ಥಳಕ್ಕೆ ಕರೆಸಿಕೊಂಡ ಗ್ರಾಮಸ್ಥರು, ಕೆಸರು ಗದ್ದೆಯಾಗಿದ್ದ ರಸ್ತೆಯಲ್ಲೇ ಅವರು ಬೈಕ್ ಓಡಿಸುವ ಶಿಕ್ಷೆ ನೀಡಿದ್ದಾರೆ. ಗ್ರಾಮಸ್ಥರು ಅನುಭವಿಸುತ್ತಿರುವ ಸಂಕಷ್ಟವನ್ನು ಅಧಿಕಾರಿಯೂ ಅರಿಯಲಿ ಎಂಬ ಉದ್ದೇಶದಿಂದ ಹೀಗೆ ಮಾಡಿದ್ದಾರೆ. ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಸಮೀಪದ ಮೈದೊಳಲು ಗ್ರಾಮದಲ್ಲಿ ಜಮೀನುಗಳಿಗೆ ಹೋಗುವ ಸಂಪರ್ಕ ರಸ್ತೆ ಕೆಸರು ಗದ್ದೆಯಂತಾಗಿ, ತೊಂದರೆಯಾಗಿತ್ತು.

ಗ್ರಾಮಪಂಚಾಯಿತಿಗೆ ಮನವಿ ಮಾಡಿ ದುರಸ್ತಿಗೆ ಒತ್ತಾಯಿಸಲಾಗಿತ್ತು. ಉದ್ಯೋಗ ಖಾತ್ರಿ ಯೋಜನೆ ಇಂಜಿನಿಯರ್ ನಿರ್ಲಕ್ಷ್ಯ ವಹಿಸಿದ್ದರಿಂದ ಅವರನ್ನೇ ಸ್ಥಳಕ್ಕೆ ಕರೆಸಿ, ಕೆಸರಿನಲ್ಲೇ ಬೈಕ್ ಓಡಿಸುವಂತೆ ಹೇಳಿದ್ದಾರೆ. ಕೊನೆಗೆ ಪೊಲೀಸರು ಬಂದು ಪರಿಸ್ಥಿತಿ ತಿಳಿಯಾಗಿಸಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...