alex Certify
ಕನ್ನಡ ದುನಿಯಾ       Mobile App
       

Kannada Duniya

ಮತದಾನ ಮಾಡದ ರಮ್ಯಾ ವಿರುದ್ಧ ಬಿಜೆಪಿ ಕಾರ್ಯಕರ್ತನ ವಾಟ್ಸಾಪ್ ಅಭಿಯಾನ

ಮಂಡ್ಯ: ಸದಾ ಒಂದಿಲ್ಲೊಂದು ವಿವಾದ, ವಿಷಯಗಳಿಂದ ಸುದ್ದಿಯಲ್ಲಿರುವ ಮಾಜಿ ಸಂಸದೆ ರಮ್ಯಾ ಈಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿಯೂ ಮತದಾನ ಮಾಡದೇ ಸುದ್ದಿಯಲ್ಲಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆ ಹಾಗೂ ನಿನ್ನೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆ ಎರಡರಲ್ಲಿಯೂ ರಮ್ಯಾ ಓಟ್ ಮಾಡಿಲ್ಲ. ಈ ಹಿನ್ನಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಕಾರ್ಯಕರ್ತರೊಬ್ಬರು ರಮ್ಯಾ ವಿರುದ್ಧ ಚಳುವಳಿಯನ್ನೇ ಆರಂಭಿಸಿದ್ದಾರೆ.

ಮಂಡ್ಯದ ಉಪ್ಪರಕನಹಳ್ಳಿ ಗ್ರಾಮದ ಶಿವಕುಮಾರ್ ಆರಾಧ್ಯ ಎಂಬ ಬಿಜೆಪಿ ಕಾರ್ಯಕರ್ತ ರಮ್ಯಾ ವಿರುದ್ಧ ಅಭಿಯಾನ ಆರಂಭಿಸಿದ್ದು, ಮತದಾನ ಮಾಡದವರು, ಚುನಾವಣೆಗೆ ನಿಲ್ಲಲು ಅಥವಾ ಮತ ಕೇಳಲು ಅರ್ಹರಲ್ಲ. ಒಂದು ವೇಳೆ ರಮ್ಯಾ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದರೆ ಅವರಿಗೆ ಯಾರೂ ಮತ ಹಾಕಬೇಡಿ ಎಂದು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲೂ ಮತದಾನ ಮಾಡದೇ ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದ್ದ ರಮ್ಯಾ, ಈಗ ನಗರಸಭೆ ಚುನಾವಣೆಯಲ್ಲೂ ಮತದಾನ ಮಾಡದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...