alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿ ಗೆಲುವಿಗೆ ಮತ್ತೊಂದು ಕಾರ್ಯತಂತ್ರ ರೂಪಿಸಿದ ಅಮಿತ್ ಶಾ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಬಿ.ಜೆ.ಪಿ. ನಾಯಕರು, ‘ಹಿಂದೂ ಮುಖಂಡರ ಹತ್ಯೆ’ ವಿಷಯವನ್ನು ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳಲು ಮುಂದಾಗಿದ್ದಾರೆ.

ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ‘ಹಿಂದೂ ನಾಯಕರ ಹತ್ಯೆ’ ವಿಚಾರವನ್ನು ಮುಂದಿಟ್ಟುಕೊಂಡು ರಾಜ್ಯದಲ್ಲಿ ಪಾದಯಾತ್ರೆ ಮತ್ತು ಬೈಕ್ ರ್ಯಾಲಿ ನಡೆಸಲು ಸಂಸದರಿಗೆ ಸೂಚನೆ ನೀಡಿದ್ದಾರೆ.

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ, ಸಂಸದರಾದ ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ನಳಿನ್ ಕುಮಾರ್ ಕಟೀಲ್ ಅವರಿಗೆ ಹಿಂದೂಗಳ ಹತ್ಯೆ ಪ್ರಕರಣವನ್ನು ರಾಜಕೀಯ ಅಸ್ತ್ರವಾಗಿ ಬಳಸಿಕೊಂಡು ರಾಜ್ಯಾದ್ಯಂತ ಪಾದಯಾತ್ರೆ, ಬೈಕ್ ರ್ಯಾಲಿ ನಡೆಸುವಂತೆ ಸೂಚಿಸಲಾಗಿದೆ. ಈ ನಾಲ್ವರು ಸಂಸದರು ಪಾದಯಾತ್ರೆ, ಬೈಕ್ ರ್ಯಾಲಿಯ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

ಬಿ.ಜೆ.ಪಿ. ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಪಾದಯಾತ್ರೆ ಮತ್ತು ಬೈಕ್ ರ್ಯಾಲಿಯ ರೂಪುರೇಷೆ ಸಿದ್ಧಪಡಿಸಲಿದ್ದಾರೆ. ಶೀಘ್ರವೇ ರಾಜ್ಯಾದ್ಯಂತ ಕೈಗೊಳ್ಳಲಿರುವ ಪಾದಯಾತ್ರೆ ಮತ್ತು ಬೈಕ್ ರ್ಯಾಲಿಗೆ ಚಾಲನೆ ನೀಡಲಾಗುವುದು. ಈ ಮೂಲಕ ಹಿಂದೂ ಕಾರ್ಯಕರ್ತರ ಹತ್ಯೆ ವಿಚಾರವನ್ನು ಚುನಾವಣಾ ಅಸ್ತ್ರವಾಗಿ ಬಳಸಿಕೊಳ್ಳಲು ಪ್ಲಾನ್ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...