alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಜೆ.ಪಿ. ಏಕತಾ ಸಮಾವೇಶಕ್ಕೆ ಅಮಿತ್ ಶಾ ಚಾಲನೆ

amit-sha

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಬಿ.ಜೆ.ಪಿ. ವತಿಯಿಂದ ಏರ್ಪಡಿಸಿರುವ ಹಿಂದುಳಿದ ವರ್ಗಗಳ ಏಕತಾ ಸಮಾವೇಶಕ್ಕೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಚಾಲನೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಮ್ಮೊಂದಿಗೆ ಅಹಿಂದ ವರ್ಗ ಇದೆ ಎಂಬ ವಿಶ್ವಾಸದಲ್ಲಿದ್ದಾರೆ. ಬಿ.ಜೆ.ಪಿ. ಕೂಡ ಹಿಂದುಳಿದ ವರ್ಗಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೆಳೆಯುವ ಉದ್ದೇಶದಿಂದ ಹಮ್ಮಿಕೊಂಡಿರುವ ಸಮಾವೇಶದಲ್ಲಿ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ, ಕೇಂದ್ರ ಸರ್ಕಾರದಿಂದ ಬರ ನಿರ್ವಹಣೆಗಾಗಿ ಸಾಕಷ್ಟು ಅನುದಾನ ನೀಡಿದ್ದರೂ, ರಾಜ್ಯ ಸರ್ಕಾರ ಸಮರ್ಪಕವಾಗಿ ಬಳಸಿಲ್ಲ ಎಂದು ದೂರಿದ್ದಾರೆ.

ಸಂಸದ ಶ್ರೀರಾಮುಲು ಮಾತನಾಡಿ, ಹಿಂದುಳಿದ ವರ್ಗದವರ ಕಲ್ಯಾಣಕ್ಕೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹೆಚ್ಚಿನ ಒತ್ತು ನೀಡಲಾಗಿತ್ತು. ಹಿಂದುಳಿದ ವರ್ಗದವರು ಪಕ್ಷವನ್ನು ಬೆಂಬಲಿಸಿ ಎಂದು ಮನವಿ ಮಾಡಿದ್ದಾರೆ.

ಏಕತಾ ಸಮಾವೇಶದಲ್ಲಿ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದಾರೆ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮೂಲಕ ಹಿಂದ ವರ್ಗದ ಸಂಘಟನೆಗೆ ಮುಂದಾಗಿರುವ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಕೂಡ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...