alex Certify
ಕನ್ನಡ ದುನಿಯಾ       Mobile App
       

Kannada Duniya

‘ಮುಂದೆ ಉಗ್ರ ಕಸಬ್ ಜಯಂತಿಯನ್ನೂ ಆಚರಿಸಬಹುದು’

ಉಡುಪಿ: ತೀವ್ರ ವಿರೋಧದ ನಡುವೆಯೂ ಟಿಪ್ಪು ಜಯಂತಿಯನ್ನು ಆಚರಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಂದಿನ ದಿನಗಳಲ್ಲಿ ಉಗ್ರ ಕಸಬ್ ಜಯಂತಿಯನ್ನೂ ಆಚರಿಸುತ್ತಾರೆ ಎಂದು ಕೇಂದ್ರ ಕೌಶಾಲ್ಯಾಭಿವೃದ್ಧಿ ಖಾತೆ ಸಚಿವ ಅನಂತ್ ಕುಮಾರ್ ಹೆಗ್ಡೆ ಟೀಕಿಸಿದ್ದಾರೆ.

ಕುಂದಾಪುರದಲ್ಲಿ ನಡೆದ ಬಿ.ಜೆ.ಪಿ. ಪರಿವರ್ತನಾ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಹಠಮಾಡಿ ಟಿಪ್ಪು ಜಯಂತಿಯನ್ನು ಆಚರಿಸಿದೆ. ಸಿದ್ಧರಾಮಯ್ಯ ಸರ್ಕಾರ ಮುಂದುವರೆದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಕಸಬ್ ಜಯಂತಿಯನ್ನೂ ಆಚರಿಸಬಹುದು ಎಂದು ಹೇಳಿದ್ದಾರೆ.

ಕಾಂಗ್ರೆಸ್ ದೇಶದ್ರೋಹಿಗಳ ಜಯಂತಿಯನ್ನು ಆಚರಿಸಲು ಮುಂದಾಗಿದೆ. ದೇಶದ್ರೋಹಿಗಳ ಜಯಂತಿ ಆಚರಿಸುವ ಮೂಲಕ ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ ಎಂದು ದೂರಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತೊಲಗಿಸಿ ಬಿ.ಜೆ.ಪಿ. ಸರ್ಕಾರ ಅಧಿಕಾರಕ್ಕೆ ತರಲು ಎಲ್ಲರೂ ಶ್ರಮಿಸಬೇಕಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...