alex Certify
ಕನ್ನಡ ದುನಿಯಾ       Mobile App
       

Kannada Duniya

BSY ವಿರುದ್ಧ ಸೇಡಿನ ರಾಜಕಾರಣ ..?

bsy-acb

ಬೆಂಗಳೂರು: ಸಚಿವ ಡಿ.ಕೆ. ಶಿವಕುಮಾರ್ ಮನೆ ಮೇಲೆ ಐ.ಟಿ. ದಾಳಿ ನಡೆದ ಬಳಿಕ ಬಿ.ಜೆ.ಪಿ., ಕಳಂಕಿತ ಸಚಿವರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಕೈಗೊಂಡಿದೆ.

ಇದಕ್ಕೆ ಪ್ರತೀಕಾರವಾಗಿ ಶಿವರಾಮಕಾರಂತ ಬಡಾವಣೆ ಡಿನೋಟಿಫಿಕೇಷನ್ ಆರೋಪಕ್ಕೆ ಸಂಬಂಧಿಸಿದಂತೆ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ ಎಫ್.ಐ.ಆರ್. ದಾಖಲಿಸಿದೆ. ಇದು ರಾಜ್ಯ ಕಾಂಗ್ರೆಸ್ ನ ಸೇಡಿನ ರಾಜಕಾರಣ ಎಂದು ಹೇಳಲಾಗಿದೆ.

ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಶಿವರಾಮಕಾರಂತ ಬಡಾವಣೆಯ 3.6 ಎಕರೆ ಜಮೀನನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಸರ್ಕಾರದ ವಿರುದ್ಧ ಬಿ.ಜೆ.ಪಿ.ಯ ಹೋರಾಟ ಆರಂಭವಾಗುತ್ತಿದ್ದಂತೆ, ಎ.ಸಿ.ಬಿ.ಯಲ್ಲಿ ಕೇಸ್ ದಾಖಲಿಸಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಬಿ.ಜೆ.ಪಿ. ನಾಯಕರ ಕೇಸ್ ಗಳ ಕುರಿತಾಗಿ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...