alex Certify
ಕನ್ನಡ ದುನಿಯಾ       Mobile App
       

Kannada Duniya

ಬೇಳೂರು ಬಂಡಾಯ ಕುರಿತು ಬಿ.ಎಸ್.ವೈ. ಹೇಳಿದ್ದೇನು ಗೊತ್ತಾ…?

ಬೆಂಗಳೂರು: ಸಾಗರ ವಿಧಾನಸಭೆ ಕ್ಷೇತ್ರದ ಬಿ.ಜೆ.ಪಿ. ಟಿಕೆಟ್ ಅನ್ನು ಮಾಜಿ ಸಚಿವ ಹರತಾಳು ಹಾಲಪ್ಪ ಅವರಿಗೆ ನೀಡಲಾಗಿದ್ದು, ಪ್ರಬಲ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ಬೇಳೂರು ಗೋಪಾಲಕೃಷ್ಣ ಬಂಡಾಯ ಸ್ಪರ್ಧೆಯ ಕುರಿತು ಪ್ರತಿಕ್ರಿಯೆ ನೀಡಿರುವ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಪರ್ಯಾಯ ವ್ಯವಸ್ಥೆಯನ್ನು ಮಾಡುವುದಾಗಿ ಬೇಳೂರು ಗೋಪಾಲಕೃಷ್ಣ ಅವರಿಗೆ ಭರವಸೆ ನೀಡಲಾಗಿತ್ತು. ಆದರೂ ಅವರು ಬಂಡಾಯ ಸ್ಪರ್ಧೆಗೆ ನಿರ್ಧರಿಸಿದ್ದಾರೆ. ಅವರು ಬಂಡಾಯವಾಗಿ ಸ್ಪರ್ಧಿಸುವ ನಿರ್ಧಾರ ಕೈಗೊಳ್ಳಲು ಸ್ವತಂತ್ರರಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ 50 -60 ಸ್ಥಾನಗಳಿಗಿಂತ ಹೆಚ್ಚು ಸ್ಥಾನಗಳನ್ನು ಗಳಿಸುವುದಿಲ್ಲ. ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಮುಂಡೇಶ್ವರಿ ಮತ್ತು ಬಾದಾಮಿ ಕ್ಷೇತ್ರದಲ್ಲಿ ಸೋಲಲಿದ್ದಾರೆ ಎಂದು ಹೇಳಿದ್ದಾರೆ.

ಇಂದು ಮಧ್ಯಾಹ್ನ ದೆಹಲಿಯಲ್ಲಿ ಪಕ್ಷದ ಕೇಂದ್ರ ಚುನಾವಣಾ ಸಮಿತಿ ನಾಯಕರು ಬಿ.ಜೆ.ಪಿ. ಅಭ್ಯರ್ಥಿಗಳ 3 ನೇ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಬಿ.ಎಸ್.ವೈ. ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...