alex Certify
ಕನ್ನಡ ದುನಿಯಾ       Mobile App
       

Kannada Duniya

ಟಿಕೆಟ್ ವಂಚಿತರಿಗೆ ಇಂತಹ ಭರವಸೆ ನೀಡಿದ್ರು ಬಿ.ಎಸ್.ವೈ

ಬೆಂಗಳೂರು: ಬಿ.ಜೆ.ಪಿ. ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆಯಾಗುತ್ತಲೇ ಬಂಡಾಯ ಭುಗಿಲೆದ್ದಿದ್ದು, ಆಕಾಂಕ್ಷಿಗಳು ಮತ್ತು ಬೆಂಬಲಿಗರ ಆಕ್ರೋಶ ಹೆಚ್ಚಾಗಿದೆ.

ಮೊದಲ ಪಟ್ಟಿಯಲ್ಲಿ 72 ಕ್ಷೇತ್ರಗಳಿಗೆ, 2 ನೇ ಪಟ್ಟಿಯಲ್ಲಿ 82 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಬಾಕಿ ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳ 3 ನೇ ಪಟ್ಟಿಯನ್ನು ನಾಳೆ ಇಲ್ಲವೇ ನಾಡಿದ್ದು ಬಿಡುಗಡೆ ಮಾಡಲಾಗುವುದು.

ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಈ ಕುರಿತು ಮಾಹಿತಿ ನೀಡಿದ್ದು, ಮಂಗಳವಾರ ಇಲ್ಲವೇ ಬುಧವಾರ 3 ನೇ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದ ಸಂದರ್ಭದಲ್ಲಿ ಬೇಸರ, ಅಸಮಾಧಾನ ವ್ಯಕ್ತವಾಗುವುದು ಸಹಜ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅವಕಾಶ ವಂಚಿತರಿಗೆ ಸೂಕ್ತವಾದ ಸ್ಥಾನಮಾನ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಪಕ್ಷಕ್ಕೆ ಹಲವರು ಮಂದಿ ಬರುತ್ತಿದ್ದಾರೆ. ಅನೇಕರ ಸೇರ್ಪಡೆಯಿಂದ ಪಕ್ಷಕ್ಕೆ ಅನುಕೂಲವಾಗಿದೆ. ಅವಕಾಶ ತಪ್ಪಿದವರಿಗೆ ಸ್ಥಾನ ಮಾನ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...