alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿ ಪರಿವರ್ತನಾ ಯಾತ್ರೆಗೆ ಭಾರೀ ಸಿದ್ದತೆ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರ ಗದ್ದುಗೆ ಹಿಡಿಯಲು ಮುಂದಾಗಿರುವ ಬಿ.ಜೆ.ಪಿ. ಈಗಾಗಲೇ ಕಾರ್ಯತಂತ್ರ ರೂಪಿಸಿದ್ದು, ನವೆಂಬರ್ 2 ರಿಂದ ನವಕರ್ನಾಟಕ ಪರಿವರ್ತನಾ ಯಾತ್ರೆ ಕೈಗೊಂಡಿದೆ.

ಮುಖ್ಯಮಂತ್ರಿ ಅಭ್ಯರ್ಥಿ, ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಯಾತ್ರೆಯ ಜವಾಬ್ದಾರಿ ಹೊತ್ತಿದ್ದು, ಈಗಾಗಲೇ ಸಿದ್ಧತೆಗಳು ನಡೆದಿದೆ

ಬಿ.ಜೆ.ಪಿ. ರಾಜ್ಯ ಉಸ್ತುವಾರಿ ಮುರಳೀಧರರಾವ್, ಚುನಾವಣಾ ಉಸ್ತುವಾರಿಗಳಾದ ಪ್ರಕಾಶ್ ಜಾವಡೇಕರ್, ಪಿಯೂಶ್ ಗೋಯಲ್ ಅವರು ಈಗಾಗಲೇ ಸಲಹೆ, ಸೂಚನೆ ನೀಡಿದ್ದಾರೆ. ಬೀದರ್ ನಿಂದ ಚಾಮರಾಜನಗರದವರೆಗೆ, ಕೋಲಾರದಿಂದ ಮಂಗಳೂರುವರೆಗೆ ಪ್ರತಿ ಬೂತ್ ಗಳಿಂದಲೂ ಕಾರ್ಯಕರ್ತರು ಆಗಮಿಸಲಿದ್ದಾರೆ.

ಸುಮಾರು 55,000 ಬೂತ್ ಸಮಿತಿ ಇದ್ದು, ಪ್ರತಿ ಬೂತ್ ನಿಂದ ಮೂವರು ಕಾರ್ಯಕರ್ತರು ಬೈಕ್ ಗಳಲ್ಲಿ ಆಗಮಿಸಲಿದ್ದಾರೆ. 1 ಬೈಕ್ ಗೆ ಇಬ್ಬರಂತೆ ಸುಮಾರು 1.65 ಲಕ್ಷ ಬೈಕ್ ಗಳಲ್ಲಿ 3.55 ಲಕ್ಷ ಕಾರ್ಯಕರ್ತರು ಆಗಮಿಸಲಿದ್ದಾರೆ.

ನವೆಂಬರ್ 2 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಕಾರ್ಯಕರ್ತರೆಲ್ಲಾ ಸೇರಲಿದ್ದು, ಪ್ರಧಾನಿ ನರೇಂದ್ರ ಮೋದಿ ನವಕರ್ನಾಟಕ ಪರಿವರ್ತನಾ ಯಾತ್ರೆಗೆ ಚಾಲನೆ ನೀಡಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...