alex Certify
ಕನ್ನಡ ದುನಿಯಾ       Mobile App
       

Kannada Duniya

ಗಂಗೂಲಿಯಂತೆ ಶರ್ಟ್ ಬಿಚ್ಚಿ ಸಂಭ್ರಮಿಸಿದ ಬಿಜೆಪಿ ಅಭ್ಯರ್ಥಿ

ನಾಟ್ ವೆಸ್ಟ್ ಸರಣಿಯಲ್ಲಿ ಸೌರವ್ ಗಂಗೂಲಿ ಶರ್ಟ್ ಬಿಚ್ಚಿ ಗೆಲುವಿನ ಸಂಭ್ರಮವನ್ನು ಆಚರಿಸಿದ್ದು, ಎಲ್ಲರಿಗೂ ನೆನಪಿರಬಹುದು. ಅದೇ ರೀತಿ ಬಿಜೆಪಿ ಅಭ್ಯರ್ಥಿಯೊಬ್ಬರು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜಯ ದಾಖಲಿಸುತ್ತಿದ್ದಂತೆ ಶರ್ಟ್ ಬಿಚ್ಚಿ ಸಂಭ್ರಮಿಸಿದ್ರು. ಈ ವಿಡಿಯೋ ಮತ್ತು ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಯ ಚುನಾವಣೆ ಫಲಿತಾಂಶ ಹೊರ ಬಿದ್ದಿದೆ. ಗೆದ್ದವರ ಸಂಭ್ರಮಾಚರಣೆ ಜೋರಾಗಿದೆ. ಈ ಮಧ್ಯ ಬಾಗಲಕೋಟೆಯ ಬಿಜೆಪಿ ಅಭ್ಯರ್ಥಿ ಭರ್ಜರಿ ಜಯ ಸಾಧಿಸಿದ್ರು. ಆಗ ವಿಜೇತ ಅಭ್ಯರ್ಥಿ ವೀರಪ್ಪ ಸಿರಗಣ್ಣವರ್ ಶರ್ಟ್ ಬಿಚ್ಚಿ ಸಂಭ್ರಮಿಸಿದ್ರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 8430 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಇಳಿದಿದ್ರು. ಇದ್ರಲ್ಲಿ 2306 ಕಾಂಗ್ರೆಸ್, 2203 ಬಿಜೆಪಿ ಹಾಗೂ 1397 ಜೆಡಿಎಸ್ ಕಣದಲ್ಲಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...