alex Certify
ಕನ್ನಡ ದುನಿಯಾ       Mobile App
       

Kannada Duniya

ಸೋತ ಅಭ್ಯರ್ಥಿಯೊಂದಿಗೆ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು-ಕಾರಣವೇನು ಗೊತ್ತಾ?

ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸಿದ್ದರಾಮಯ್ಯನವರು ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಅಭ್ಯರ್ಥಿ ಶಿವರಾಮೇಗೌಡರ ವಿರುದ್ಧ ಪರಾಭವಗೊಂಡಿದ್ದಾರೆ. ಅಚ್ಚರಿಯ ಸಂಗತಿಯೆಂದರೆ ಇಲ್ಲಿ ಬಿಜೆಪಿ ಅಭ್ಯರ್ಥಿ ಸೋತರೂ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.

ಇದಕ್ಕೆ ಕಾರಣವೂ ಇದೆ. ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಎರಡು ಲಕ್ಷಕ್ಕೂ ಅಧಿಕ ಮತ ಗಳಿಸಿರುವುದು ಈ ಸಂಭ್ರಮಾಚರಣೆಗೆ ಕಾರಣ.

ಈ ಹಿನ್ನೆಲೆಯಲ್ಲಿ ಮಂಡ್ಯ ಪಕ್ಷದ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಸಿದ ಕಾರ್ಯಕರ್ತರು, ಬಿಜೆಪಿ ಪರಾಜಿತ ಅಭ್ಯರ್ಥಿ ಸಿದ್ದರಾಮಯ್ಯನವರನ್ನು ಅಭಿನಂದಿಸಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿಗೆ ಎರಡು ಲಕ್ಷಕ್ಕೂ ಅಧಿಕ ಮತ ಬಂದಿರುವ ಕಾರಣ ಮುಂದಿನ ಚುನಾವಣೆಯಲ್ಲಿ ಗೆಲುವಿನ ವಿಶ್ವಾಸದಲ್ಲಿದ್ದಾರೆ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...