alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಜೆ.ಪಿ.ಗೆ ತಿರುಗುಬಾಣವಾಗುತ್ತಾ ‘ಕಪ್ಪ ಕಾಣಿಕೆ’ ವಿಚಾರ..?

ಬೆಂಗಳೂರು: ಪಕ್ಷದ ವರಿಷ್ಠರಿಗೆ ಕಪ್ಪ ಸಲ್ಲಿಕೆ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಟೀಕಿಸುತ್ತಿದ್ದ ಬಿ.ಜೆ.ಪಿ. ನಾಯಕರಿಗೆ ಹಿನ್ನಡೆಯಾಗಿದೆ.

ವಿಧಾನ ಪರಿಷತ್ ಸದಸ್ಯ ಗೋವಿಂದರಾಜ್ ಅವರಿಗೆ ಸೇರಿದ್ದೆನ್ನಲಾದ ಡೈರಿಯಲ್ಲಿ ಹೈಕಮಾಂಡ್ ಗೆ ಕಪ್ಪ ಕೊಡಲಾದ ಮಾಹಿತಿ ಇದೆ ಎಂದು ಬಿ.ಜೆ.ಪಿ. ನಾಯಕರು ಕಾಂಗ್ರೆಸ್ ವಿರುದ್ಧ ಮುಗಿಬಿದ್ದಿದ್ದರು.

ಇದಕ್ಕೆ ತಿರುಗೇಟು ನೀಡಿದ್ದ ಕಾಂಗ್ರೆಸ್, ಬಿ.ಜೆ.ಪಿ. ಕಾರ್ಯಕ್ರಮವೊಂದರಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅನಂತ್ ಕುಮಾರ್ ಅವರ ನಡುವಿನ ಸಂಭಾಷಣೆಯ ವಿಡಿಯೋ ಬಿಡುಗಡೆ ಮಾಡಿತ್ತು.

ಅದರಲ್ಲಿ ಪಕ್ಷದ ವರಿಷ್ಠರಿಗೆ ಕಪ್ಪ ಸಲ್ಲಿಸಿದ ವಿಚಾರವಾಗಿ ಇಬ್ಬರೂ ಮಾತನಾಡಿದ್ದರು. ಈ ಪ್ರಕರಣದ ತನಿಖೆಗೆ ಕಾಂಗ್ರೆಸ್ ನಾಯಕರು ದೂರು ನೀಡಿದ್ದರು. ಬಳಿಕ ಆಡಿಯೋ ಸಂಭಾಷಣೆಯಲ್ಲಿನ ಧ್ವನಿ ಗುರುತಿಸಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.

ಪ್ರಯೋಗಾಲಯದಿಂದ ಎಫ್.ಎಸ್.ಎಲ್. ವರದಿಯನ್ನು ನೀಡಲಾಗಿದ್ದು, ಸಿ.ಡಿ.ಯಲ್ಲಿರುವ ಧ್ವನಿ ಯಡಿಯೂರಪ್ಪ ಮತ್ತು ಅನಂತ್ ಕುಮಾರ್ ಅವರದ್ದೇ ಎಂದು ಸ್ಪಷ್ಟಪಡಿಸಲಾಗಿದೆ. ವರದಿ ಸೈಬರ್ ಪೊಲೀಸರ ಕೈ ಸೇರಿದೆ.

ಕಪ್ಪ ಸಲ್ಲಿಕೆ ವಿಚಾರ ಭ್ರಷ್ಟಾಚಾರ ಪ್ರಕರಣವಾಗಿರುವ ಕಾರಣ ಸೈಬರ್ ಪೊಲೀಸರು ಎ.ಸಿ.ಬಿ.ಗೆ ಪ್ರಕರಣ ವರ್ಗಾಯಿಸಿದ್ದಾರೆ. ಈ ಹಿನ್ನಲೆಯಲ್ಲಿ ಯಡಿಯೂರಪ್ಪ ಮತ್ತು ಅನಂತ್ ಕುಮಾರ್ ವಿರುದ್ಧ ಎಫ್.ಐ.ಆರ್. ದಾಖಲಿಸಲು ಎ.ಸಿ.ಬಿ. ಮುಂದಾಗಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ, ನನ್ನ ವಿರುದ್ಧ ಎಷ್ಟೇ ಕೇಸ್ ದಾಖಲಿಸಲಿ, ತಲೆ ಕೆಡಿಸಿಕೊಳ್ಳುವುದಿಲ್ಲ. ಸಿದ್ಧರಾಮಯ್ಯ ಎ.ಸಿ.ಬಿ.ಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...