alex Certify
ಕನ್ನಡ ದುನಿಯಾ       Mobile App
       

Kannada Duniya

ವಾರದಲ್ಲಿ ಬಹುಮತ ಸಾಬೀತುಪಡಿಸಲು ಬಿ.ಜೆ.ಪಿ. ಸೀಕ್ರೆಟ್ ಪ್ಲಾನ್

ಅತಂತ್ರ ವಿಧಾನಸಭೆ ಫಲಿತಾಂಶ ಬಂದಿದ್ದು, ಸರಳ ಬಹುಮತ ಇಲ್ಲದಿದ್ದರೂ, ಬಿ.ಜೆ.ಪಿ. ಸರ್ಕಾರ ರಚನೆಗೆ ಮುಂದಾಗಿದ್ದು, ಬಹುಮತ ಸಾಬೀತುಪಡಿಸಲು ರಾಜ್ಯಪಾಲರಿಗೆ 1 ವಾರ ಅವಕಾಶ ಕೇಳಲಾಗಿದೆ.

ರಾಜ್ಯಪಾಲರನ್ನು ಭೇಟಿ ಮಾಡಿದ ಬಿ.ಎಸ್. ಯಡಿಯೂರಪ್ಪ, ಅನಂತ್ ಕುಮಾರ್, ಶ್ರೀರಾಮುಲು ಅವರು, ಅತಿದೊಡ್ಡ ಪಕ್ಷವಾಗಿರುವ ಬಿ.ಜೆ.ಪಿ.ಗೆ ಸರ್ಕಾರ ರಚನೆಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ. 1 ವಾರದೊಳಗೆ ಬಹುಮತ ಸಾಬೀತುಪಡಿಸುವುದಾಗಿ ತಿಳಿಸಿದ್ದಾರೆ.

ಆದರೆ, 104 ಸ್ಥಾನಗಳನ್ನು ಮಾತ್ರ ಹೊಂದಿರುವ ಬಿ.ಜೆ.ಪಿ. ಬಹುಮತವನ್ನು ಹೇಗೆ ಸಾಬೀತುಪಡಿಸಲಿದೆ ಎನ್ನುವುದೇ ಯಕ್ಷ ಪ್ರಶ್ನೆಯಾಗಿದೆ. ಹಿಂದೆ ಇಂತಹುದೇ ಪರಿಸ್ಥಿತಿಯಲ್ಲಿ ಅನೇಕ ರಾಜ್ಯಗಳಲ್ಲಿ ಸರ್ಕಾರ ರಚನೆ ಮಾಡಿರುವ ಅಮಿತ್ ಶಾ, ರಾಜ್ಯದಲ್ಲಿಯೂ ಸರ್ಕಾರ ರಚಿಸಿ, ಬಹುಮತ ಸಾಬೀತುಪಡಿಸಲು ಸೀಕ್ರೆಟ್ ಪ್ಲಾನ್ ಮಾಡಿದ್ದಾರೆ.

ಬಿ.ಜೆ.ಪಿ. ಆಪರೇಷನ್ ಕಮಲ ನಡೆಸುವ ಸಾಧ್ಯತೆ ಹಿನ್ನಲೆಯಲ್ಲಿ ಕಾಂಗ್ರೆಸ್ ಹಾಗೂ ಜೆ.ಡಿ.ಎಸ್. ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಆ ಪಕ್ಷಗಳ ನಾಯಕರು ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...