alex Certify
ಕನ್ನಡ ದುನಿಯಾ       Mobile App
       

Kannada Duniya

ಕುತೂಹಲಕ್ಕೆ ಕಾರಣವಾಗಿದೆ ಪಾಟೀಲ್ ನಿವಾಸಕ್ಕೆ ಬಿಜೆಪಿ ಶಾಸಕರ ಭೇಟಿ

ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಕಾಂಗ್ರೆಸ್ ಹಿರಿಯ ನಾಯಕ ಎಂ.ಬಿ. ಪಾಟೀಲ್, ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಹಲವು ವರಿಷ್ಠರನ್ನು ಭೇಟಿ ಮಾಡಿ ಬೆಂಗಳೂರಿಗೆ ಮರಳಿದ್ದಾರೆ.

ತಮಗೆ ಉಪ ಮುಖ್ಯಮಂತ್ರಿ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ನೀಡಬೇಕೆಂದು ಎಂ.ಬಿ. ಪಾಟೀಲ್ ಮಾಡಿದ್ದ ಮನವಿಯನ್ನು ಕಾಂಗ್ರೆಸ್ ವರಿಷ್ಠರು ಒಪ್ಪಿಕೊಂಡಿಲ್ಲವೆಂದು ಹೇಳಲಾಗಿದ್ದು, ಮಂತ್ರಿ ಸ್ಥಾನ ನೀಡುವ ಭರವಸೆಯನ್ನು ನೀಡಿದ್ದರಾದರೂ ಅದು ಸದ್ಯಕ್ಕೆ ಈಡೇರುವ ಲಕ್ಷಣಗಳಿಲ್ಲ. ಹೀಗಾಗಿಯೇ ದೆಹಲಿಗೆ ತೆರಳಿದ್ದ ಎಂ.ಬಿ. ಪಾಟೀಲ್ ಬರಿಗೈಯಲ್ಲಿ ಮರಳಿ ಬಂದಿದ್ದಾರೆ.

ಇದರ ಮಧ್ಯೆ ಬಿಜೆಪಿ ಶಾಸಕ ಶಿವರಾಜ್ ಪಾಟೀಲ್, ಇಂದು ಎಂ.ಬಿ. ಪಾಟೀಲ್ ಅವರ ಸದಾಶಿವ ನಗರದ ನಿವಾಸಕ್ಕೆ ಭೇಟಿ ನೀಡಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಪಾಟೀಲರೊಂದಿಗಿನ ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಿವರಾಜ್ ಪಾಟೀಲ್, ಎಂ.ಬಿ. ಪಾಟೀಲರು ತಮ್ಮ ಹಳೆ ಸ್ನೇಹಿತರಾಗಿದ್ದು, ಯಾವುದೇ ರಾಜಕೀಯ ವಿಚಾರಗಳನ್ನು ಮಾತನಾಡಿಲ್ಲ ಎಂದಿದ್ದಾರೆ. ಆದರೆ ರಾಜ್ಯ ಬಿಜೆಪಿ ನಾಯಕರು ನೀಡಿದ ಸಂದೇಶವನ್ನು ಎಂ.ಬಿ. ಪಾಟೀಲ್ ಅವರಿಗೆ ಶಿವರಾಜ್ ಪಾಟೀಲ್ ತಲುಪಿಸಿದ್ದಾರೆಂದು ಹೇಳಲಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...