alex Certify
ಕನ್ನಡ ದುನಿಯಾ       Mobile App
       

Kannada Duniya

ಗುಟ್ಟು ಬಿಡದ BJP: ರಾಜಭವನದತ್ತ ಎಲ್ಲರ ಚಿತ್ತ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಿ.ಜೆ.ಪಿ. 104, ಕಾಂಗ್ರೆಸ್ 78, ಜೆ.ಡಿ.ಎಸ್. 32, ಇತರರು 2 ಸ್ಥಾನ ಗಳಿಸಿದ್ದಾರೆ.

ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ರೂ ಬಿ.ಜೆ.ಪಿ.ಗೆ ಸರಳ ಬಹುಮತವಿಲ್ಲದ ಕಾರಣ, ಸರ್ಕಾರ ರಚನೆಗೆ ಕಾಂಗ್ರೆಸ್ ಹಾಗೂ ಜೆ.ಡಿ.ಎಸ್. ಮುಂದಾಗಿವೆ. ಜೆ.ಡಿ.ಎಸ್.ಗೆ ಕಾಂಗ್ರೆಸ್ ನಿಂದ ಬೆಂಬಲ ಘೋಷಿಸಲಾಗಿದ್ದು, ಜೆ.ಡಿ.ಎಸ್. ನಾಯಕ ಹೆಚ್.ಡಿ. ಕುಮಾರಸ್ವಾಮಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಸರಳ ಬಹುಮತವಿರುವ ತಮಗೆ ಸರ್ಕಾರ ರಚನೆಗೆ ಆಹ್ವಾನಿಸಬೇಕೆಂದು ಕುಮಾರಸ್ವಾಮಿ ರಾಜ್ಯಪಾಲರಿಗೆ ಮನವಿ ಮಾಡಲಿದ್ದಾರೆ.

ಆದರೆ, ಇದಕ್ಕಿಂತ ಮೊದಲೇ ಬಿ.ಜೆ.ಪಿ. ನಾಯಕರು ಸರ್ಕಾರ ರಚನೆಗೆ ಹಕ್ಕು ಮಂಡಿಸಲು ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ಬಿ.ಎಸ್. ಯಡಿಯೂರಪ್ಪ, ಅನಂತ್ ಕುಮಾರ್, ಶ್ರೀರಾಮುಲು ಅವರು ರಾಜ್ಯಪಾಲರನ್ನು ಭೇಟಿ ಮಾಡಿ, ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ತಮಗೆ ಸರ್ಕಾರ ರಚನೆಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ.

ಸರಳ ಬಹುಮತವಿಲ್ಲದಿದ್ದರೂ ಬಿ.ಜೆ.ಪಿ. ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಮುಂದಾಗಿದೆ. ಇದೇ ವೇಳೆ ಜೆ.ಡಿ.ಎಸ್. ಅನ್ನು ಬಿ.ಜೆ.ಪಿ. ಸಂಪರ್ಕಿಸಿಲ್ಲ. ಬಿ.ಜೆ.ಪಿ.ನಡೆ ಕುತೂಹಲ ಮೂಡಿಸಿದೆ. ರಾಜ್ಯಪಾಲ ವಜೂಭಾಯ್ ವಾಲಾ ಅವರು ಯಾವ ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...