alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಎಸ್.ವೈ., ಶೋಭಾ ಕರಂದ್ಲಾಜೆ ವಿರುದ್ಧ ದೂರು

ಮಂಗಳೂರು: ಬಿ.ಜೆ.ಪಿ. ಬಿಡುಗಡೆ ಮಾಡಿದ ಚಾರ್ಜ್ ಶೀಟ್ ನಲ್ಲಿ ಯಡವಟ್ಟು ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ದೂರು ನೀಡಲಾಗಿದೆ.

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ಜೆ.ಪಿ. ಹೊರತಂದಿರುವ ಚಾರ್ಜ್ ಶೀಟ್ ಅನ್ನು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಸೇರಿ ಹಲವು ನಾಯಕರು ಬಿಡುಗಡೆ ಮಾಡಿದ್ದರು. ಚಾರ್ಜ್ ಶೀಟ್ ನಲ್ಲಿ ಬಿ.ಬಿ.ಎಂ.ಪಿ. ಕಾಂಗ್ರೆಸ್ ಕಾರ್ಪೊರೇಟರ್ ಮಂಜುಳಾ ನಾರಾಯಣಸ್ವಾಮಿ ಅವರ ಬದಲಿಗೆ ಮಂಗಳೂರು ಕಾಂಗ್ರೆಸ್ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಅವರ ಫೋಟೋ ಬಳಸಲಾಗಿದೆ.

ಶಾಸಕ ಮುನಿರತ್ನ ಬೆಂಬಲಿಗರು ಮಂಜುಳಾ ಅವರ ಮೇಲೆ ಹಲ್ಲೆ ಮಾಡಿದ್ದ ಪ್ರಕರಣವನ್ನು ಬಿಂಬಿಸಿದ್ದ ಬಿ.ಜೆ.ಪಿ. ಚಾರ್ಜ್ ಶೀಟ್ ನಲ್ಲಿ ಪ್ರತಿಭಾ ಕುಳಾಯಿ ಫೋಟೋ ಬಳಸಲಾಗಿದೆ.

ಇದರಿಂದ ಅಸಮಾಧಾನಗೊಂಡಿರುವ ಪ್ರತಿಭಾ ಕುಳಾಯಿ, ಮಾನನಷ್ಟ ಮೊಕದ್ದಮೆ ದೂರು ದಾಖಲಿಸಿದ್ದಾರೆ. ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಸಂಬಂಧಿಸಿದ ಠಾಣೆ ಮತ್ತು ಕೋರ್ಟ್ ಗೆ ಅವರು ದೂರು ನೀಡಲು ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...