alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿ ಚುನಾವಣಾ ಪ್ರಣಾಳಿಕೆ ಸುಳ್ಳಿನ ಕಂತೆ-ಸಿದ್ದರಾಮಯ್ಯ

ಶಿವಮೊಗ್ಗ : ಬಿಜೆಪಿ ಪ್ರಣಾಳಿಕೆ ಸುಳ್ಳಿನ ಕಂತೆ. ಜನರಿಗೆ ಸುಳ್ಳು ಭರವಸೆಯನ್ನು ನೀಡಲು ಹೊರಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರು ಈಗಾಗಲೇ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ತೀರ್ಮಾನ ಮಾಡಿದ್ದಾರೆ. ಫಲಿತಾಂಶ ನಮ್ಮ ಪರವಾಗಿರುತ್ತದೆ ಎಂದರು.

ಪ್ರಣಾಳಿಕೆ ಬಿಡುಗಡೆಯಿಂದ ಬಿಜೆಪಿಯ ಮತಗಳಲ್ಲಿ ಶೇ.4 ರಷ್ಟು ಹೆಚ್ಚಳವಾಗುತ್ತಿದೆ ಎಂದು ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಮತ ಗಳಿಕೆ ಹೆಚ್ಚಳವಾಗುವುದಿಲ್ಲ. ಬದಲಿಗೆ ಕಡಿಮೆಯಾಗುತ್ತದೆ. ಯಡಿಯೂರಪ್ಪ ಹೇಳಿಕೆಯನ್ನು ಯಾರೂ ನಂಬುವುದಿಲ್ಲ ಎಂದರು.

ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಓಲೈಕೆ ದೃಷ್ಟಿಯಿಂದ ಬಿಜೆಪಿಯವರು ಹೇಳಿಕೆ ನೀಡತೊಡಗಿದ್ದಾರೆ. ದಲಿತರ ಉದ್ದಾರ ಮಾಡುತ್ತೇವೆ ಎನ್ನುತ್ತಾರೆ. ಈ ಹಿಂದೆ ಅಧಿಕಾರದಲ್ಲಿದ್ದಾಗ ದಲಿತರ ಕಲ್ಯಾಣಕ್ಕೆ ಯಾವುದೇ ಕೊಡುಗೆ ನೀಡಲಿಲ್ಲ. ಕೇವಲ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಹೇಳಿಕೆ ನೀಡುತ್ತಿದ್ದಾರೆ ಎಂದು ಆಪಾದಿಸಿದರು.

ಬಿಜೆಪಿ 150 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವುದಾಗಿ ಹೇಳುತ್ತಿದೆ. 50 ಸ್ಥಾನದಲ್ಲಿ ಗೆಲುವು ಸಾಧಿಸುವುದು ಕಷ್ಟವಿದೆ. ಬಿ.ಎಸ್.ಯಡಿಯೂರಪ್ಪನವರು ಮೇ 17 ಅಥವಾ 18 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಾಗಿ ಹೇಳಿಕೆ ನೀಡುತ್ತಿದ್ದಾರೆ. ಅವರಿಗೆ ವಯಸ್ಸಾಗಿದೆ. ಹಾಗಾಗಿ ಈ ರೀತಿಯ ಹೇಳಿಕೆಗಳು ಹೊರಬರುತ್ತಿವೆ ಎಂದು ಹೇಳಿದರು.

ಜಾತಿ ಹಾಗೂ ಧರ್ಮಗಳ ನಡುವೆ ಸಂಘರ್ಷವನ್ನುಂಟುಮಾಡಿ ಗೆಲುವು ಸಾಧಿಸುವುದೇ ಬಿಜೆಪಿ ಅಜೆಂಡಾ. ಸಮಾಜದಲ್ಲಿ ಸಾಮರಸ್ಯ ಹಾಳು ಮಾಡುವುದೇ ಅವರ ಮೂಲ ಉದ್ದೇಶ. ಮತದಾರರು ಇದಕ್ಕೆ ಬಲಿಯಾಗುವುದಿಲ್ಲ. ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತರಲಿದ್ದಾರೆ ಎಂದು ಭವಿಷ್ಯ ನುಡಿದರು.

ಚಾಮುಂಡೇಶ್ವರಿ ಹಾಗೂ ಬಾದಾಮಿ ಎರಡೂ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಶಿವಮೊಗ್ಗಕ್ಕೆ ನೂರು ಜನ ನರೇಂದ್ರ ಮೋದಿ ಬಂದರೂ ಚುನಾವಣೆ ಮೇಲೆ ಪ್ರಭಾವ ಬೀರಲು ಸಾಧ್ಯವಿಲ್ಲ ಎಂದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...