alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಜೆ.ಪಿ. ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಇದರ ನಡುವೆ ವಿವಿಧ ಕ್ಷೇತ್ರಗಳಿಂದ ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ರೆಡಿಯಾಗಿವೆ.

ಬಿ.ಜೆ.ಪಿ. ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದ್ದು, ಕೇಂದ್ರ ನಾಯಕರ ಒಪ್ಪಿಗೆಗೆ ಕಳಿಸಲಾಗುತ್ತದೆ. ನೈರುತ್ಯ ಪದವೀಧರರ ಕ್ಷೇತ್ರದಿಂದ ಮಾಜಿ ಸಂಸದ ಆಯನೂರು ಮಂಜುನಾಥ್, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಅಭ್ಯರ್ಥಿಗಳಾಗಿದ್ದಾರೆ.

ಗಣೇಶ್ ಕಾರ್ಣಿಕ್ ಹಾಲಿ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ವಿಧಾನ ಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿ ನೈರುತ್ಯ ಪದವೀಧರ ಕ್ಷೇತ್ರದ ಸದಸ್ಯರಾಗಿದ್ದಾರೆ. ಶಂಕರಮೂರ್ತಿ ಬದಲಿಗೆ ಈ ಬಾರಿ ಆಯನೂರು ಮಂಜುನಾಥ್ ಅವರನ್ನು ಕಣಕ್ಕಿಳಿಸಲು ಬಿ.ಜೆ.ಪಿ. ನಿರ್ಧರಿಸಿದೆ ಎನ್ನಲಾಗಿದೆ.

ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಹಲವು ಆಕಾಂಕ್ಷಿಗಳಿದ್ದು, ಅವರಲ್ಲಿ ಆಯನೂರು ಮಂಜುನಾಥ್ ಅವರ ಹೆಸರನ್ನು ಬಹುತೇಕ ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...