alex Certify
ಕನ್ನಡ ದುನಿಯಾ       Mobile App
       

Kannada Duniya

‘ನಾವು ಹೇಳಿದ್ದಕ್ಕಿಂತ ಜಾಸ್ತಿ ವರಿಷ್ಠರಿಗೆ ಗೊತ್ತಿದೆ’

K_S_Eshwarappa gh 3

ನವದೆಹಲಿ: ರಾಜ್ಯ ಬಿ.ಜೆ.ಪಿ. ಯಲ್ಲಿನ ಭಿನ್ನಮತ ದೆಹಲಿ ಅಂಗಳ ತಲುಪಿದ್ದು, ಪಕ್ಷದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ವಿಧಾನಪರಿಷತ್ ನಾಯಕ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಪಕ್ಷದ ಮುಖಂಡರು ವರಿಷ್ಠರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಯಡಿಯೂರಪ್ಪನವರು ಕೋರ್ ಕಮಿಟಿಯಲ್ಲಿ ಚರ್ಚಿಸದೇ ಏಕಪಕ್ಷೀಯವಾಗಿ ಬಿ,ಜೆ.ಪಿ. ಪದಾಧಿಕಾರಿಗಳನ್ನು ನೇಮಕ ಮಾಡಿದ್ದಾರೆ. ಅಲ್ಲದೇ, ಯಾರೊಂದಿಗೂ ಚರ್ಚಿಸದೇ ಪಕ್ಷದ ಶಿಸ್ತು ಸಮಿತಿ ಪದಾಧಿಕಾರಿಗಳನ್ನು ನೇಮಕ ಮಾಡಿದ್ದಾರೆ ಎಂದು ಈಶ್ವರಪ್ಪ ನೇತೃತ್ವದ ನಿಯೋಗ ಬಿ.ಜೆ.ಪಿ. ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮ್ ಲಾಲ್ ಅವರಿಗೆ ದೂರು ನೀಡಿದೆ. ರಾಮ್ ಲಾಲ್ ಅವರನ್ನು ಭೇಟಿಯಾಗಿ ಬಂದ ಈಶ್ವರಪ್ಪ, ಮತ್ತೆ ಯಡಿಯೂರಪ್ಪನವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಅಭಿಪ್ರಾಯವನ್ನು ವರಿಷ್ಠರ ಗಮನಕ್ಕೆ ತಂದಿದ್ದೇನೆ. ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದ್ದೇನೆ. ಅವರು ನೀವು ಹೇಳಿದ್ದಕ್ಕಿಂತ ಜಾಸ್ತಿ ನಮ್ಮ ಗಮನಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ ಎಂದು ಈಶ್ವರಪ್ಪ ಮಾಹಿತಿ ನೀಡಿದ್ದಾರೆ. ಯಾರೂ ಎಷ್ಟೇ ದೊಡ್ಡವರಾಗಿದ್ದರೂ ಶಿಸ್ತು ಕ್ರಮ ಕೈಗೊಳ್ಳುವುದು ನಿಶ್ಚಿತ ಎಂಬ ಯಡಿಯೂರಪ್ಪನವರ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಎಷ್ಟೇ ದೊಡ್ಡವರಾದರೂ ತಪ್ಪು ಮಾಡಿದಾಗ ಕ್ರಮ ಕೈಗೊಳ್ಳಬೇಕು ಎಂದು ಈಶ್ವರಪ್ಪ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...