alex Certify
ಕನ್ನಡ ದುನಿಯಾ       Mobile App
       

Kannada Duniya

ಯಡಿಯೂರಪ್ಪ ಸ್ವಕ್ಷೇತ್ರದಲ್ಲಿ ಮುಗಿಲು ಮುಟ್ಟಿದ ಸಂಭ್ರಮ

ರಾಜ್ಯದ 23 ನೇ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಇಂದು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇದಕ್ಕಾಗಿ ಸಕಲ ಸಿದ್ದತೆಗಳು ನಡೆದಿದ್ದು, ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯನ್ನು ತಳಿರುತೋರಣಗಳಿಂದ ಸಿಂಗರಿಸಲಾಗಿದೆ. ರಾಜಭವನದ ಬಳಿ ವಿವಿಧ ಕಲಾ ತಂಡಗಳು ಪ್ರದರ್ಶನ ನೀಡುತ್ತಿವೆ.

ಅತ್ತ ಯಡಿಯೂರಪ್ಪನವರ ಸ್ವಕ್ಷೇತ್ರ ಶಿಕಾರಿಪುರದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿದೆ. ವಿಧಾನನಭಾ ಚುನಾವಣೆಯಲ್ಲಿ ಬಿಜೆಪಿ ಅತ್ಯಧಿಕ ಸ್ಥಾನ ಗಳಿಸಿದರೂ ಬಹುಮತ ಲಭಿಸದ ಕಾರಣ ತಮ್ಮ ನಾಯಕನಿಗೆ ಮುಖ್ಯಮಂತ್ರಿ ಸ್ಥಾನ ಲಭಿಸುವುದೋ ಇಲ್ಲವೋ ಎಂಬ ಆತಂಕದಲ್ಲಿದ್ದವರು ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ನಿರಾಳರಾಗಿದ್ದು, ಪಟಾಕಿ ಸಿಡಿಸಿ ಸಂತಸ ವ್ಯಕ್ತಪಡಿಸಿದ್ದಾರೆ.

ಕಳೆದ ರಾತ್ರಿಯೇ ಶಿವಮೊಗ್ಗ, ಶಿಕಾರಿಪುರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಬಿಜೆಪಿ ಕಾರ್ಯಕರ್ತರು ಹಾಗೂ ಯಡಿಯೂರಪ್ಪನವರ ಅಭಿಮಾನಿಗಳು ಸಹಸ್ರಾರು ಸಂಖ್ಯೆಯಲ್ಲಿ ರಾಜಧಾನಿಗೆ ಧಾವಿಸುತ್ತಿದ್ದು, ತಮ್ಮ ನೆಚ್ಚಿನ ನಾಯಕ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವುದನ್ನು ಕಣ್ತುಂಬಿಕೊಳ್ಳಲಿದ್ದಾರೆ. ಶಿವಮೊಗ್ಗದ ವಿನೋಬನಗರದಲ್ಲಿರುವ ಯಡಿಯೂರಪ್ಪನವರ ನಿವಾಸದಲ್ಲೂ ಸಂಭ್ರಮ ಮನೆ ಮಾಡಿದೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...