alex Certify
ಕನ್ನಡ ದುನಿಯಾ       Mobile App
       

Kannada Duniya

ಅತಂತ್ರ ಜಿಪಂ ಗಳಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ

JDS_BJP 29

ಬೆಂಗಳೂರು: ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ಈಗಾಗಲೇ ನಿಗದಿಯಾಗಿದೆ. ಅತಂತ್ರ ಜಿಲ್ಲಾ ಪಂಚಾಯಿತಿಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲು ತೀರ್ಮಾನಿಸಿವೆ ಎನ್ನಲಾಗಿದೆ.

ಬಿಬಿಎಂಪಿಯಲ್ಲಿ ಹೆಚ್ಚು ಸ್ಥಾನ ಗಳಿಸಿದ್ದರೂ, ಅಧಿಕಾರ ರಚಿಸುವಲ್ಲಿ ವಿಳಂಬ ನೀತಿ ಅನುಸರಿಸಿದ್ದರಿಂದ, ಬಿಜೆಪಿ ಅಧಿಕಾರದಿಂದ ದೂರ ಇರುವಂತಾಗಿದೆ. ಕಾಂಗ್ರೆಸ್, ಜೆಡಿಎಸ್ ಮೈತ್ರಿ ಆಡಳಿತ ಬಿಬಿಎಂಪಿಯಲ್ಲಿದೆ. ಕಾಂಗ್ರೆಸ್ ನೊಂದಿಗೆ ಮುನಿಸಿಕೊಂಡಿರುವ ಜೆಡಿಎಸ್, ಬಿಜೆಪಿ ಜೊತೆ ಕೈಜೋಡಿಸಲಿದೆ ಎನ್ನಲಾಗಿದೆ. ಇದಕ್ಕೆ ಮೊದಲ ಹಂತವಾಗಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಹಿಡಿಯಲು ಹೊಂದಾಣಿಕೆ ಮಾಡಿಕೊಳ್ಳಲು ಯೋಜಿಸಿವೆ ಎಂದು ತಿಳಿದುಬಂದಿದೆ.

ಬಿಜೆಪಿ ಮುಖಂಡ, ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಅವರು, ಜೆಡಿಎಸ್ ನಾಯಕರೊಂದಿಗೆ ಮಾತುಕತೆ ನಡೆಸಿದ್ದು, ಇದಕ್ಕೆ ಸಹಮತ ವ್ಯಕ್ತವಾಗಿದೆ ಎಂದಿದ್ದಾರೆ. ಹೀಗಾದಲ್ಲಿ ಅತಂತ್ರ ಜಿಲ್ಲಾ ಪಂಚಾಯಿತಿಗಳಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...