alex Certify
ಕನ್ನಡ ದುನಿಯಾ       Mobile App
       

Kannada Duniya

ಈಶಾನ್ಯ ಗೆದ್ದಾಯ್ತು, ಈಗ ಕರ್ನಾಟಕದತ್ತ ಬಿಜೆಪಿ ಕಣ್ಣು

ವಾಸ್ತು ಪ್ರಕಾರ ಈಶಾನ್ಯ ಮೂಲೆಗೆ ಮಹತ್ವವಿದೆ. ಈಶಾನ್ಯ ಭಾಗದ 3 ರಾಜ್ಯಗಳಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ 2 ರಾಜ್ಯಗಳಲ್ಲಿ ಭರ್ಜರಿ ಜಯ ಗಳಿಸಿರುವ ಬಿ.ಜೆ.ಪಿ. ದಶಕಗಳಿಂದ ಆಡಳಿತ ನಡೆಸುತ್ತಿದ್ದ ಲೆಫ್ಟ್ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಉಂಟು ಮಾಡಿದೆ. ದೇಶದಲ್ಲಿ ಬಿ.ಜೆ.ಪಿ. ಅಧಿಕಾರದಲ್ಲಿರುವ ರಾಜ್ಯಗಳ ಪಟ್ಟಿ ಮತ್ತೆ ಬೆಳೆದಿದೆ.

ಈಗ ಎಲ್ಲಾ ಪಕ್ಷಗಳ ಚಿತ್ತ ಕರ್ನಾಟಕದತ್ತ ನೆಟ್ಟಿದೆ. ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ಕರ್ನಾಟಕದಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್, ಬಿ.ಜೆ.ಪಿ. ನಾಯಕರು ಬಿರುಸಿನ ಪ್ರಚಾರ ನಡೆಸಿದ್ದಾರೆ. ವಿವಿಧ ಭಾಗಗಳಲ್ಲಿ ಪ್ರವಾಸ ನಡೆಸಿ ಪಕ್ಷದ ಕಾರ್ಯಕರ್ತರಲ್ಲಿ ಚೈತನ್ಯ ತುಂಬಿದ್ದಾರೆ. ಜೆ.ಡಿ.ಎಸ್. ನಾಯಕರು ಕೂಡ ರಾಜ್ಯದಲ್ಲಿ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದು, ಜೋರಾಗಿಯೇ ಚುನಾವಣೆ ತಯಾರಿ ನಡೆಸಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಬಿ.ಜೆ.ಪಿ. ಯಶಸ್ಸಿನ ಹಾದಿಯಲ್ಲಿ ಸಾಗಿದೆ. ಕಳೆದ ಲೋಕಸಭೆ ಚುನಾವಣೆ ಬಳಿಕ, ವಿಧಾನಸಭೆ ಚುನಾವಣೆ ನಡೆದ ಬಹುತೇಕ ರಾಜ್ಯಗಳಲ್ಲಿ ಬಿ.ಜೆ.ಪಿ. ಅಧಿಕಾರಕ್ಕೆ ಬಂದಿದೆ. ಇಲ್ಲವೇ, ಮಿತ್ರ ಪಕ್ಷಗಳೊಂದಿಗೆ ಅಧಿಕಾರ ರಚಿಸಿದೆ. ಇದೇ ವೇಳೆ ಕಾಂಗ್ರೆಸ್ ಗೆ ಹಿನ್ನಡೆಯಾಗ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿದ್ದು, ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಈಗಾಗಲೇ ನಾಯಕರು ಕಾರ್ಯೋನ್ಮುಖರಾಗಿದ್ದಾರೆ. ದಕ್ಷಿಣ ಭಾರತದಲ್ಲಿ ಬಿ.ಜೆ.ಪಿ.ಗೆ ಕರ್ನಾಟಕವೇ ಪ್ರಮುಖ ನೆಲೆಯಾಗಿದೆ. ಇಲ್ಲಿ ಅಧಿಕಾರಕ್ಕೆ ಬಂದರೆ, ಉಳಿದ ರಾಜ್ಯಗಳಲ್ಲಿಯೂ ಪಕ್ಷವನ್ನು ಸಂಘಟಿಸಲು ಅನುಕೂಲವಾಗುತ್ತದೆ ಎಂಬ ಲೆಕ್ಕಾಚಾರದಲ್ಲಿ ಬಿ.ಜೆ.ಪಿ. ನಾಯಕರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು, ಈಶಾನ್ಯ ರಾಜ್ಯಗಳಲ್ಲಿ ಗೆಲುವಿನ ಬಳಿಕ ಮುಂದಿನ ಗುರಿ ಕರ್ನಾಟಕ ಎಂದು ಹೇಳಿದ್ದಾರೆ. ಚುನಾವಣೆ ಗೆಲುವಿಗೆ ಕಾರ್ಯತಂತ್ರ ರೂಪಿಸಿದ್ದಾರೆ. ಕಾಂಗ್ರೆಸ್, ಜೆ.ಡಿ.ಎಸ್. ಕೂಡ ಗೆಲುವಿಗೆ ಕಾರ್ಯತಂತ್ರ ರೂಪಿಸಿದ್ದು, ರಾಜ್ಯದ ಮತದಾರರು ಯಾರಿಗೆ ಅಧಿಕಾರ ನಡೆಸಲು ಅವಕಾಶ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...