alex Certify
ಕನ್ನಡ ದುನಿಯಾ       Mobile App
       

Kannada Duniya

ಇಂದು ಚಲಾವಣೆಯಾಗುತ್ತಿರುವ ಮತಗಳೆಷ್ಟು…?

ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿಗೆ ಇಂದು ಬಹು ಪ್ರಮುಖ ದಿನ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಬಹುಮತ ಸಾಬೀತುಪಡಿಸಬೇಕಿರುವ ಹಿನ್ನಲೆಯಲ್ಲಿ ಅದಕ್ಕೆ ಅಗತ್ಯವಾದ ಶಾಸಕರ ಬೆಂಬಲ ಗಿಟ್ಟಿಸಿಕೊಳ್ಳಲು ಬಿಜೆಪಿ ನಾಯಕರಿಂದ ಪ್ರಯತ್ನ ನಡೆಯುತ್ತಿದೆ.

ರಾಜ್ಯದ 224 ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಈ ಪೈಕಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಎರಡು ಕ್ಷೇತ್ರಗಳಿಂದ ಆಯ್ಕೆಯಾಗಿದ್ದಾರೆ. ಅಲ್ಲದೇ ಬಿಜೆಪಿ ಶಾಸಕರಾಗಿದ್ದ ಕೆ.ಜಿ. ಬೋಪಯ್ಯ ಹಂಗಾಮಿ ಸ್ಪೀಕರ್ ಆಗಿ ಆಯ್ಕೆಯಾಗಿರುವ ಕಾರಣ ಒಟ್ಟು 220 ಮಂದಿ ಶಾಸಕರು ಇಂದು ತಮ್ಮ ಮತ ಚಲಾಯಿಸಲಿದ್ದಾರೆ.

ಬಹುಮತ ಸಾಬೀತುಪಡಿಸಲು ಯಡಿಯೂರಪ್ಪನವರಿಗೆ 111 ಶಾಸಕರ ಬೆಂಬಲ ಅಗತ್ಯವಿದ್ದು, ಬಿಜೆಪಿ ಶಾಸಕರು 104 ಮಂದಿಯಿದ್ದರೂ ಕೆ.ಜಿ. ಬೋಪಯ್ಯ ಹಂಗಾಮಿ ಸ್ಪೀಕರ್ ಆಗಿ ಆಯ್ಕೆಯಾಗಿರುವ ಕಾರಣ 103 ಮಂದಿ ಶಾಸಕರು ಮತ ಚಲಾಯಿಸಲಿದ್ದಾರೆ. ಒಂದು ವೇಳೆ ವಿಶ್ವಾಸಮತ ‘ಟೈ’ ಆದಲ್ಲಿ ಹಂಗಾಮಿ ಸ್ಪೀಕರ್ ಕೆ.ಜಿ. ಬೋಪಯ್ಯ ತಮ್ಮ ಮತ ಚಲಾಯಿಸಲಿದ್ದಾರೆ. ಕಾಂಗ್ರೆಸ್ ನಲ್ಲಿ 78 ಮಂದಿ ಶಾಸಕರಿದ್ದು, ಜೆಡಿಎಸ್ ಮಿತ್ರ ಪಕ್ಷ ಬಿ ಎಸ್ ಪಿ ಶಾಸಕರ ಒಂದು ಮತ ಸೇರಿದಂತೆ ಒಟ್ಟು 38 ಶಾಸಕರನ್ನು ಹೊಂದಿದ್ದರೂ ಕುಮಾರಸ್ವಾಮಿ ಎರಡು ಕ್ಷೇತ್ರಗಳಿಂದ ಆಯ್ಕೆಯಾಗಿರುವ ಕಾರಣ 37 ಮತ ಚಲಾವಣೆಯಾಗಲಿದೆ. ಜೊತೆಗೆ ಎರಡು ಮಂದಿ ಪಕ್ಷೇತರ ಶಾಸಕರು ಇಂದು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...