alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಜೆ.ಪಿ. ಪಾಳಯಕ್ಕೆ ಪಕ್ಷೇತರ ಶಾಸಕ

ಕರ್ನಾಟಕ ಪ್ರಜ್ಞಾವಂತರ ಪಕ್ಷದಿಂದ ಗೆದ್ದಿರುವ ರಾಣೆಬೆನ್ನೂರು ಶಾಸಕ ಆರ್. ಶಂಕರ್ ಬಿ.ಜೆ.ಪಿ. ಪಾಳಯ ಸೇರಿದ್ದಾರೆ. ಕೆ.ಎಸ್. ಈಶ್ವರಪ್ಪ ಅವರೊಂದಿಗೆ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ ಅವರು ಚರ್ಚೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಬಿ.ಜೆ.ಪಿ.ಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.

ಈಶ್ವರಪ್ಪ ಅವರ ಸಂಬಂಧಿಯಾಗಿರುವ ಶಂಕರ್ ವಿಜೇತರಾದ ಕೂಡಲೇ ಅವರನ್ನು ಸಂಪರ್ಕಿಸಲಾಗಿದೆ. ಶಂಕರ್ ವಿಜಯೋತ್ಸವ ಆಚರಿಸುವಾಗ ಅವರನ್ನು ಭೇಟಿ ಮಾಡಿದ ಈಶ್ವರಪ್ಪ ಪುತ್ರ ಕಾಂತೇಶ್ ಪಕ್ಷಕ್ಕೆ ಆಹ್ವಾನಿಸಿದ್ದಾರೆ. ಬಿ.ಜೆ.ಪಿ.ಗೆ ಸರ್ಕಾರ ರಚಿಸುವಷ್ಟು ಬಹುಮತ ಬರುವುದಿಲ್ಲ ಎನ್ನುವ ಕಾರಣದಿಂದ ಸಂಜೆಯೇ ಶಂಕರ್ ಅವರನ್ನು ಸಂಪರ್ಕಿಸಿ ಕರೆತರಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...