alex Certify
ಕನ್ನಡ ದುನಿಯಾ       Mobile App
       

Kannada Duniya

ವರಿಷ್ಠರ ಸೂಚನೆಗೆ ತಲೆಕೆಡಿಸಿಕೊಳ್ಳದ ಈಶ್ವರಪ್ಪ

ks-mantral

ರಾಯಚೂರು: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಚಟುವಟಿಕೆಗಳಿಂದ ಪಕ್ಷದ ಮುಖಂಡರು ದೂರವಿರಬೇಕು. ಪಕ್ಷದ ವೇದಿಕೆಯಲ್ಲಿಯೇ ಸಂಘಟನೆ ಮಾಡಬೇಕೆಂದು ವರಿಷ್ಠರು ಸೂಚನೆ ನೀಡಿದ್ದರೂ, ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ತಲೆಕೆಡಿಸಿಕೊಂಡಿಲ್ಲ.

ಮೇ 8 ರಂದು ರಾಯಚೂರಿನಲ್ಲಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಪದಾಧಿಕಾರಿಗಳ ಸಭೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಮಂತ್ರಾಲಯಕ್ಕೆ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ 224 ಕ್ಷೇತ್ರಗಳಿಂದ ತಲಾ 6 ಮಂದಿ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಂಗೊಳ್ಳಿ ರಾಯಣ್ಣ ಬ್ರಿಗೇಡ್, ಯುವ ಬ್ರಿಗೇಡ್ ಸಭೆ ನಡೆಯಲಿದ್ದು, ಮುಂದಿನ ಕಾರ್ಯಯೋಜನೆಗಳ ಬಗ್ಗೆ ಚರ್ಚಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಬಿ.ಜೆ.ಪಿ. ಕಾರ್ಯಕಾರಿಣಿ ಮೈಸೂರಿನಲ್ಲಿ ನಡೆಯುತ್ತಿರುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಮಾಹಿತಿ ಬಂದರೆ ಸಭೆಗೆ ಹೋಗುವೆ ಎಂದು ಹೇಳಿದ್ದಾರೆ.

ಮಂತ್ರಾಲಯ ರಾಯರ ಮಠಕ್ಕೆ ಭೇಟಿ ನೀಡಿದ್ದ ಈಶ್ವರಪ್ಪ, ರಾಯರ ದರ್ಶನ ಪಡೆದಿದ್ದಾರೆ. ರಾಯಚೂರಿನಲ್ಲಿ ನಡೆಯಲಿರುವ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಭೆ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಬಿ.ಜೆ.ಪಿ. ರಾಜ್ಯ ಉಸ್ತುವಾರಿ ಮುರಳೀಧರ ರಾವ್ ಅವರು ಪಕ್ಷದ ಹೊರತಾಗಿ ಯಾವ ಸಂಘಟನೆಗಳನ್ನು ನಡೆಸದಂತೆ ಸೂಚನೆ ನೀಡಿದ್ದರು. ಇದಕ್ಕೆ ತಲೆಕೆಡಿಸಿಕೊಳ್ಳದ ಈಶ್ವರಪ್ಪ, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಭೆ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...