alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಎಂ ದಂಗೆ ಹೇಳಿಕೆಗೆ ಕಾಂಗ್ರೆಸ್ ಗರಂ…!

ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ಯತ್ನದ ವಿರುದ್ಧ ರಾಜ್ಯದ ಜನ ದಂಗೆ ಏಳುವಂತೆ ಕರೆ ನೀಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಕಾಂಗ್ರೆಸ್ ಗರಂ ಆಗಿದೆ.

ಗುರುವಾರದಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಯವರ ಹೇಳಿಕೆಯನ್ನು ಪ್ರಸ್ತಾಪಿಸಿದ ಕೆಲ ಕಾಂಗ್ರೆಸ್ ಸಚಿವರು, ಈ ರೀತಿಯ ಹೇಳಿಕೆ ಸರ್ಕಾರದ ಮೇಲೆ ಪರಿಣಾಮ ಬೀರುತ್ತದೆ ಎಂದು ತಿಳಿಸಿದರೆನ್ನಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಕೆಲ ಕಾಂಗ್ರೆಸ್ ಶಾಸಕರು ಬಿಜೆಪಿ ನಾಯಕರ ಆಮಿಷಕ್ಕೆ ಒಳಗಾಗಿದ್ದಾರೆ. ತಾವು ಈ ಮಾತುಗಳನ್ನು ಗುಪ್ತಚರ ಇಲಾಖೆಯಿಂದ ಪಡೆದ ಮಾಹಿತಿ ಆಧಾರದ ಮೇಲೆ ಹೇಳುತ್ತಿರುವುದಾಗಿ ತಿಳಿಸಿದರೆನ್ನಲಾಗಿದೆ.

ಬಳಿಕ ಉಭಯ ಪಕ್ಷಗಳ ನಾಯಕರು ತಮ್ಮ ತಮ್ಮ ಪಕ್ಷದ ಶಾಸಕರುಗಳನ್ನು ಬಿಜೆಪಿಯವರ ಆಮಿಷಕ್ಕೆ ಒಳಗಾಗದಂತೆ ಹಿಡಿದಿಟ್ಟುಕೊಳ್ಳುವ ಕುರಿತು ತೀರ್ಮಾನ ಕೈಗೊಳ್ಳಲಾಯಿತು ಎಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...