alex Certify
ಕನ್ನಡ ದುನಿಯಾ       Mobile App
       

Kannada Duniya

ಬೀದಿಯಲ್ಲಿ ಬಿ.ಜೆ.ಪಿ. ಟಿಕೆಟ್ ಆಕಾಂಕ್ಷಿಗಳ ಫೈಟಿಂಗ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆಯ ಎ.ಪಿ.ಎಂ.ಸಿ. ಮೈದಾನದಲ್ಲಿ ಇಂದು ಬಿ.ಜೆ.ಪಿ. ಪರಿವರ್ತನಾ ಯಾತ್ರೆಯ ಸಮಾವೇಶ ನಡೆಯಲಿದೆ.

ವೇದಿಕೆ ಬಳಿ ಹಾಕಲಾಗಿದ್ದ ಫ್ಲೆಕ್ಸ್ ಹರಿದ ವಿಚಾರಕ್ಕೆ ಸಂಬಂಧಿಸಿದಂತೆ ಟಿಕೆಟ್ ಆಕಾಂಕ್ಷಿಗಳ ಬೆಂಬಲಿಗರ ನಡುವೆ ಜಗಳವಾಗಿದೆ. ಮಾಜಿ ಶಾಸಕ ಡಿ.ಎಸ್. ಸುರೇಶ್ ಮತ್ತು ಬಿ.ಜೆ.ಪಿ. ಮುಖಂಡ ಹೆಚ್.ಎಂ. ಗೋಪಿಕೃಷ್ಣ ಅವರ ಬೆಂಬಲಿಗರ ನಡುವೆ ಜಗಳವಾಗಿದೆ.

ಸಮಾವೇಶದ ಸ್ಥಳದಲ್ಲಿ ಗೋಪಿಕೃಷ್ಣ ಅವರ ಫ್ಲೆಕ್ಸ್ ಗಳನ್ನು ಹಾಕಿದ್ದು, ಅದನ್ನು ಸುರೇಶ್ ಬೆಂಬಲಿಗರು ಹರಿದು ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಇದೇ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಜಗಳಕ್ಕೆ ತಿರುಗಿದ್ದು, ಸಮಾವೇಶದ ಸ್ಥಳದಲ್ಲಿದ್ದ ಕುರ್ಚಿಗಳನ್ನು ಮುರಿದು ಹಾಕಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಮಂಗಳವಾರ ರಾಜ್ಯ ಬಿ.ಜೆ.ಪಿ. ನಾಯಕರು ಸಮಾವೇಶದಲ್ಲಿ ಭಾಗವಹಿಸಲಿದ್ದು, ಆಕಾಂಕ್ಷಿಗಳನ್ನು ಸಮಾಧಾನಪಡಿಸುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...