alex Certify
ಕನ್ನಡ ದುನಿಯಾ       Mobile App
       

Kannada Duniya

ಪೇದೆಗೆ ಅವಾಜ್ ಹಾಕಿ ಸಂಕಷ್ಟಕ್ಕೆ ಸಿಲುಕಿದ ಶಾಸಕರ ಪುತ್ರ

ಕರ್ತವ್ಯನಿರತ ಪೊಲೀಸ್ ಪೇದೆಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಮುಧೋಳ ಕ್ಷೇತ್ರದ ಶಾಸಕ ಗೋವಿಂದ ಕಾರಜೋಳರ ಪುತ್ರ ಅರುಣ್ ಕಾರಜೋಳ ಸಂಕಷ್ಟಕ್ಕೆ ಸಿಲುಕಿದ್ದಾರೆ.

ತಮ್ಮ ಪಕ್ಷದ ಕಾರ್ಯಕರ್ತರಿಗೆ ಪೊಲೀಸ್ ಪೇದೆ ಮಲ್ಲೇಶಪ್ಪ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಕರೆ ಮಾಡಿದ್ದ ಅರುಣ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರೆಂದು ಹೇಳಲಾಗಿದೆ.

ಸೋಮವಾರ ಬೆಳಗ್ಗೆ ಮುಧೋಳದ ಶಿವಾಜಿ ಸರ್ಕಲ್ ನಲ್ಲಿ ಅರುಣ್, ನೋ ಪಾರ್ಕಿಂಗ್ ಜಾಗದಲ್ಲಿ ತಮ್ಮ ಕಾರು ನಿಲ್ಲಿಸಿದ್ದು, ಅಲ್ಲಿಯೇ ಕರ್ತವ್ಯದಲ್ಲಿದ್ದ ಮಲ್ಲೇಶಪ್ಪ ಇದನ್ನು ಪ್ರಶ್ನಿಸಿದ ವೇಳೆ ಮತ್ತೆ ನಿಂದಿಸಿದ್ದಾರೆ ಎಂದು ಹೇಳಲಾಗಿದೆ.

ಇದೀಗ ಅರುಣ್ ವಿರುದ್ಧ ಮುಧೋಳ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ರಕ್ಷಣಾಧಿಕಾರಿ ರಿಷ್ಯಂತ್ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...