alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಮುಂಡೇಶ್ವರಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸದ ಬಿ.ಜೆ.ಪಿ.

ವಿಧಾನಸಭೆ ಚುನಾವಣೆಗೆ ಬಿ.ಜೆ.ಪಿ. 2 ನೇ ಪಟ್ಟಿ ಬಿಡುಗಡೆಯಾಗಿದ್ದು, 82 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪರ್ಧಿಸಲಿರುವ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಿಸಿಲ್ಲ. ಸಿ.ಎಂ. ಪುತ್ರ ಡಾ. ಯತೀಂದ್ರ ಸ್ಪರ್ಧಿಸಲಿರುವ ವರುಣಾ ಕ್ಷೇತ್ರಕ್ಕೆ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಸ್ಪರ್ಧಿಸಲಿದ್ದಾರೆ. ಈಗಾಗಲೇ ಅವರು ಕ್ಷೇತ್ರದಲ್ಲಿ ಮನೆ ಮಾಡಿ ಭರ್ಜರಿ ಪ್ರಚಾರವನ್ನೂ ನಡೆಸಿದ್ದಾರೆ. ಆದರೆ, ಅವರಿಗೆ 2 ನೇ ಪಟ್ಟಿಯಲ್ಲೂ ಟಿಕೆಟ್ ಘೋಷಣೆಯಾಗಿಲ್ಲ.

ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಬಿ.ಜೆ.ಪಿ. ವರಿಷ್ಠರು 3 ನೇ ಪಟ್ಟಿಯಲ್ಲಿ ಘೋಷಣೆ ಮಾಡುವ ನಿರೀಕ್ಷೆ ಇದೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...