alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಜೆ.ಪಿ. ಪರಿವರ್ತನಾ ಯಾತ್ರೆಗೆ ಮೋದಿ, ಶಾ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಸಜ್ಜಾಗಿರುವ ಬಿ.ಜೆ.ಪಿ., ನವೆಂಬರ್ 2 ರಿಂದ ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ ಕೈಗೊಂಡಿದೆ.

ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರ ಸಮೀಪದ ಮೈದಾನದಲ್ಲಿ ನವೆಂಬರ್ 2 ರಂದು ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಉದ್ಘಾಟನೆ ಸಮಾರಂಭದಲ್ಲಿ ಲಕ್ಷಾಂತರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಜನವರಿ 28 ರಂದು ನಡೆಯುವ ಯಾತ್ರೆಯ ಸಮಾರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.

ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್ ನೇತೃತ್ವದಲ್ಲಿ ರಾಜ್ಯ ಬಿ.ಜೆ.ಪಿ.ಯ ಪ್ರಮುಖರು ನವ ಕರ್ನಾಟಕ ಪರಿವರ್ತನಾ ಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಿದ್ದಾರೆ.

ಡಿಸೆಂಬರ್ 17 ರಂದು ಯಾತ್ರೆ ಹುಬ್ಬಳ್ಳಿ ತಲುಪಲಿದ್ದು, ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುವುದು. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದಾರೆ. ಇದರೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿಯೂ ಬೃಹತ್ ಸಮಾವೇಶ ನಡೆಸಲಾಗುವುದು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...