
ಬೆಂಗಳೂರು: ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಬಿ.ಎಸ್. ಯಡಿಯೂರಪ್ಪ ಹೊರತುಪಡಿಸಿ, ಬೇರೆ ಸಂಸದರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶವಿಲ್ಲ ಎಂದು ಬಿ.ಜೆ.ಪಿ.ವರಿಷ್ಠರು ಹೇಳಿದ್ದರಾದರೂ, ಸಂಸದ ಶ್ರೀರಾಮುಲು ಅವರಿಗೆ ಮೊಳಕಾಲ್ಮೂರು ಕ್ಷೇತ್ರದಲ್ಲಿ ಟಿಕೆಟ್ ನೀಡಲಾಗಿದೆ.
ಸಂಸದರಾದ ಬಿ.ಎಸ್. ಯಡಿಯೂರಪ್ಪ ಶಿಕಾರಿಪುರ, ಶ್ರೀರಾಮುಲು ಮೊಳಕಾಲ್ಮೂರು ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದು, ಮತ್ತೊಬ್ಬರು ಸಂಸದರಿಗೆ ಟಿಕೆಟ್ ನೀಡಲಾಗ್ತಿದೆ. ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಯಶವಂತಪುರ ಕ್ಷೇತ್ರದಲ್ಲಿ ಸ್ಪರ್ಧೆಗೆ ಅವಕಾಶ ನೀಡಲಾಗ್ತಿದೆ.
ಬಿ.ಜೆ.ಪಿ. ಅಭ್ಯರ್ಥಿಗಳ 3 ನೇ ಪಟ್ಟಿಯಲ್ಲಿ ಶೋಭಾ ಕರಂದ್ಲಾಜೆ ಅವರಿಗೆ ಯಶವಂತಪುರ ಕ್ಷೇತ್ರದಲ್ಲಿ ಟಿಕೆಟ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.