alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯಕ್ಕೆ ದೌಡಾಯಿಸಲಿರುವ ಬಿಜೆಪಿ ರಾಷ್ಟ್ರೀಯ ನಾಯಕರು

ಬೆಂಗಳೂರು: ರಾಜ್ಯ ರಾಜಕೀಯ ಕ್ಷಣಕ್ಷಣಕ್ಕೂ ಕುತೂಹಲವನ್ನು ಕೆರಳಿಸುತ್ತಿದ್ದು, ಯಾವುದೇ ಸಂದರ್ಭದಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗುವ ಸಾಧ್ಯತೆ ಹಿನ್ನಲೆಯಲ್ಲಿ ಬಿಜೆಪಿ ವರಿಷ್ಠರು ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.

ಒಂದೊಮ್ಮೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಉರುಳಿದಲ್ಲಿ ತಕ್ಷಣ ಬಿಜೆಪಿ ಸಭೆ ನಡೆಸಿ, ಸರ್ಕಾರ ರಚನೆಯತ್ತ ಮುಂದಾಗಬೇಕೆಂಬ ನಿಟ್ಟಿನಲ್ಲಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚನೆ ಮೇರೆಗೆ ಗಂಭೀರ ಚರ್ಚೆ ನಡೆಸುವ ಉದ್ದೇಶದಿಂದ ಬಿಜೆಪಿ ರಾಷ್ಟ್ರೀಯ ನಾಯಕರಾದ ಕೇಂದ್ರ ಸಚಿವ ಪ್ರಕಾಶ್​ ಜಾವಡೇಕರ್​, ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್​ ರಾವ್ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ನಾಳೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ಶಾಸಕರ ಸಭೆ ನಡೆಯಲಿದ್ದು, ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಬಗ್ಗೆ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ನಾಯಕರಿಗೆ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲರೂ ಸಿದ್ದರಾಗಿರುವಂತೆ ಹೇಳಿದ್ದಾರೆ ಎನ್ನಲಾಗಿದೆ. ಈ ನಡುವೆ ಇಂದು ಬಿ.ಎಸ್.ವೈ. ಡಾಲರ್ಸ್ ಕಾಲೋನಿ ನಿವಾಸದಲ್ಲಿ ಬಿಜೆಪಿ ನಾಯಕರ ಸಭೆ ನಡೆಯುತ್ತಿದ್ದು, ಆಪರೇಷನ್ ಕಮಲಕ್ಕೆ ಬೆಂಬಲ ವ್ಯಕ್ತಪಡಿಸುತ್ತಿರುವ ಬಹುತೇಕ ನಾಯಕರು ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...