alex Certify
ಕನ್ನಡ ದುನಿಯಾ       Mobile App
       

Kannada Duniya

ಶಿವಮೊಗ್ಗ ಜಿಲ್ಲೆ ಪ್ರವೇಶಿಸಿದ ‘ನವ ಕರ್ನಾಟಕ ಪರಿವರ್ತನಾ ಯಾತ್ರೆ’

ಶಿವಮೊಗ್ಗ : ಮುಂದಿನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಹಮ್ಮಿಕೊಂಡಿರುವ ನವ ಕರ್ನಾಟಕ ಪರಿವರ್ತನಾ ಯಾತ್ರೆ ಇಂದು ಜಿಲ್ಲೆಯನ್ನು ಪ್ರವೇಶಿಸಿದ್ದು, ಇಂದು ಶಿಕಾರಿಪುರ ತಾಲ್ಲೂಕಿನಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ನಾಳೆ ಎನ್ಇಎಸ್ ಮೈದಾನದಲ್ಲಿ ಹಾಗೂ ಹರಮಘಟ್ಟದಲ್ಲಿ ಶಿವಮೊಗ್ಗ ನಗರ ಮತ್ತು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಸಮಾವೇಶ ನಡೆಯಲಿದೆ.

ನಾಳಿನ ಸಮಾವೇಶಕ್ಕೆ ಇಡೀ ಶಿವಮೊಗ್ಗ ನಗರ ಸಜ್ಜಾಗಿದ್ದು, ಫ್ಲೆಕ್ಸ್, ಬ್ಯಾನರ್ ಗಳಿಂದ ಕಂಗೊಳಿಸುತ್ತಿದೆ. ನಗರದ ಪ್ರಮುಖ ವೃತ್ತಗಳು, ಪ್ರಮುಖ ರಸ್ತೆಗಳು ಹಾಗೂ ನಗರವನ್ನು ಪ್ರವೇಶಿಸುವ ರಸ್ತೆಗಳಲ್ಲಿ ಬೃಹತ್ ಫ್ಲೆಕ್ಸ್ ಗಳನ್ನು ಅಳವಡಿಸಲಾಗಿದೆ. ಪ್ರಮುಖ ರಸ್ತೆಗಳ ಉದ್ದಕ್ಕೂ ಬಿಜೆಪಿ ನಾಯಕರು, ಚುನಾಯಿತ ಪ್ರತಿನಿಧಿಗಳು ಹಾಗೂ ಪಕ್ಷದ ಪದಾಧಿಕಾರಿಗಳ ಫ್ಲೆಕ್ಸ್ ಗಳು ರಾರಾಜಿಸುತ್ತಿವೆ.

ಸಮಾವೇಶದ ಯಶಸ್ಸಿಗೆ ಶುಭಾಶಯ ಕೋರಿ ಫ್ಲೆಕ್ಸ್ ಗಳನ್ನ ಹಾಕಲಾಗಿದೆ. ಸಮಾವೇಶ ಸಂಪರ್ಕಿಸುವ ರಸ್ತೆಗಳಂತೂ ಬಿಜೆಪಿ ಧ್ವಜಗಳಿಂದ ಕಂಗೊಳಿಸುತ್ತಿವೆ. ಮಹಾದ್ವಾರಗಳನ್ನು ನಿರ್ಮಿಸಲಾಗಿದೆ. ನಗರದ ಅಮೀರ್ ಅಹಮ್ಮದ್ ವೃತ್ತವನ್ನು ಕೇಸರಿ ಬಟ್ಟೆಯಿಂದ ಅಲಂಕರಿಸಲಾಗಿದೆ. ಶಿವಮೊಗ್ಗದ ನಾಲ್ಕು ದಿಕ್ಕುಗಳಲ್ಲಿಯೂ ಬಿಜೆಪಿ ಸಮಾವೇಶಕ್ಕೆ ಸ್ವಾಗತಿಸುವ ಫ್ಲೆಕ್ಸ್ ಗಳು ರಾರಾಜಿಸುತ್ತಿದ್ದು, ಸಮಾವೇಶ ನಡೆಯುವ ಎನ್ಇಎಸ್ ಮೈದಾನದಲ್ಲಿ ಬೃಹತ್ ಗಾತ್ರದ ವೇದಿಕೆ ನಿರ್ಮಾಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...