alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಜೆ.ಪಿ. ಸಂಘರ್ಷ: ಸಂಧಾನಕ್ಕೆ ಮುಂದಾದ ಆರ್.ಎಸ್.ಎಸ್.

rss

ಬೆಂಗಳೂರು: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವಿಚಾರವಾಗಿ, ರಾಜ್ಯ ಬಿ.ಜೆ.ಪಿ.ಯ ಹಿರಿಯ ನಾಯಕರಾದ ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ನಡುವೆ ಸಂಘರ್ಷ ತಾರಕಕ್ಕೇರಿದ್ದು, ಇದನ್ನು ನಿವಾರಿಸುವ ನಿಟ್ಟಿನಲ್ಲಿ ಆರ್.ಎಸ್.ಎಸ್. ಪ್ರಯತ್ನ ನಡೆಸಿದೆ.

ಜನವರಿ 17 ರಂದು ಚಾಮರಾಜಪೇಟೆಯಲ್ಲಿರುವ ಆರ್.ಎಸ್.ಎಸ್. ಕಚೇರಿ ‘ಕೇಶವಕೃಪಾ’ದಲ್ಲಿ ವಿಶೇಷ ಬೈಠಕ್ ನಡೆಯಲಿದ್ದು, ಆಗಮಿಸುವಂತೆ ಯಡಿಯೂರಪ್ಪ ಮತ್ತು ಈಶ್ವರಪ್ಪನವರಿಗೆ ಸೂಚನೆ ನೀಡಲಾಗಿದೆ.

ಬೈಠಕ್ ನಲ್ಲಿ ಭಾಗವಹಿಸಲು ಇಬ್ಬರೂ ನಾಯಕರು ಒಪ್ಪಿದ್ದಾರೆ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವಿಚಾರ ಮತ್ತು ಪಕ್ಷದ ಪದಾಧಿಕಾರಿಗಳ ನೇಮಕ ಮೊದಲಾದ ವಿಷಯಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಸಿ, ಸಮಸ್ಯೆಗಳಿಗೆ ಬ್ರೇಕ್ ಹಾಕಲು ಆರ್.ಎಸ್.ಎಸ್. ನಾಯಕರು ತೀರ್ಮಾನಿಸಿದ್ದಾರೆ.

ಯಡಿಯೂರಪ್ಪ ಮತ್ತು ಈಶ್ವರಪ್ಪರ ನಡುವೆ ಸಂಘರ್ಷ ಉಂಟಾಗಿರುವ ಬೆನ್ನಲ್ಲೇ ರಾಜ್ಯ ಬಿ.ಜೆ.ಪಿ.ಯ ಹಿರಿಯ ನಾಯಕರು ಬಿ.ಎಸ್.ವೈ. ಕಾರ್ಯವೈಖರಿ ಕುರಿತಾಗಿ ಪತ್ರ ಬರೆದಿದ್ದಾರೆ.

ಪತ್ರವನ್ನು ಬಹಿರಂಗಪಡಿಸಿರುವುದಕ್ಕೆ ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಬಿ.ಜೆ.ಪಿ.ಯಲ್ಲಿ ನಡೆಯುತ್ತಿರುವ ವಿದ್ಯಾಮಾನಗಳನ್ನು ಗಮನಿಸಿರುವ ಆರ್.ಎಸ್.ಎಸ್. ನಾಯಕರು, ಜನವರಿ 17 ರಂದು ನಡೆಯುವ ವಿಶೇಷ ಬೈಠಕ್ ನಲ್ಲಿ ಚರ್ಚಿಸಿ, ಗೊಂದಲಕ್ಕೆ ತೆರೆ ಎಳೆಯಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...