alex Certify
ಕನ್ನಡ ದುನಿಯಾ       Mobile App
       

Kannada Duniya

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಬಿಗ್ ಶಾಕ್

ನವೆಂಬರ್ 3 ರಂದು ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯುತ್ತಿದ್ದು, ಈ ಪೈಕಿ ಶಿವಮೊಗ್ಗ ಲೋಕಸಭಾ ಕ್ಷೇತ್ರವೂ ಕೂಡ ಒಂದು.

ಶಿವಮೊಗ್ಗ ಲೋಕಸಭಾ ಸದಸ್ಯರಾಗಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಿಂದ ಆಯ್ಕೆಯಾದ ಕಾರಣ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಹೀಗಾಗಿ ಈ ಉಪ ಚುನಾವಣೆ ನಡೆಯುತ್ತಿದೆ.

ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಯಡಿಯೂರಪ್ಪನವರ ಪುತ್ರ ಬಿ.ವೈ. ರಾಘವೇಂದ್ರ ಕಣಕ್ಕಿಳಿಯುತ್ತಿದ್ದು, ಈಗ ಎನ್.ಡಿ.ಎ. ಮಿತ್ರ ಪಕ್ಷವಾಗಿರುವ ಜೆಡಿಯು( ನಿತೀಶ್ ಕುಮಾರ್ ಬಣ) ಪಕ್ಷದಿಂದ ಮಹಿಮಾ ಪಟೇಲ್ ಸ್ಪರ್ಧಿಸಲು ಮುಂದಾಗುವುದರ ಮೂಲಕ ಬಿಜೆಪಿಗೆ ಶಾಕ್ ನೀಡಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ಪರ್ಧೆ ಕುರಿತು ಪ್ರತಿಕ್ರಿಯೆ ನೀಡಿರುವ ಜೆಡಿಯು ಅಧ್ಯಕ್ಷ ಮಹಿಮಾ ಪಟೇಲ್, ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಪ್ರತ್ಯೇಕವಾಗಿ ಸ್ಪರ್ಧಿಸಿತ್ತು. ಇದು ಕರ್ನಾಟಕಕ್ಕೂ ಅನ್ವಯವಾಗಲಿದೆ ಎಂದು ತಮ್ಮ ಸ್ಪರ್ಧೆಯನ್ನು ಸಮರ್ಥಿಸಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...