alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಜೆ.ಪಿ. ಅಧ್ಯಕ್ಷರ ಮನೆ ಮೇಲೆ ದಾಳಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪ ಪಟ್ಟಣದ ಬಿ.ಜೆ.ಪಿ. ಅಧ್ಯಕ್ಷರ ಮನೆ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದಾರೆ.

ಪಟ್ಟಣದ ಸೊರಬ ರಸ್ತೆಯಲ್ಲಿರುವ ಬಿ.ಜೆ.ಪಿ. ಅಧ್ಯಕ್ಷ ಮಂಚಿ ಶಿವಾನಂದ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ.

ಬಾಟಲಿಯಲ್ಲಿ ಪೆಟ್ರೋಲ್ ತುಂಬಿ ಬೆಂಕಿ ಹಚ್ಚಿ ಅವರ ಮನೆಯ ಮೇಲೆ ಎಸೆದಿದ್ದು, ಸ್ಪೋಟದ ತೀವ್ರತೆಗೆ ಮನೆಯ ವಸ್ತುಗಳಿಗೆ ಹಾನಿಯಾಗಿದೆ. ಗೋಡೆಗಳು ಕಪ್ಪಾಗಿವೆ. ಪ್ಲಾಸ್ಟಿಕ್ ಚೇರ್, ಬಟ್ಟೆ ಇತರೆ ವಸ್ತುಗಳು ಸುಟ್ಟು ಹೋಗಿವೆ.

ಸ್ಥಳಕ್ಕೆ ಶಿರಾಳಕೊಪ್ಪ ಠಾಣೆ ಪೊಲೀಸರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶಿರಾಳಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕಪ್ಪು ಹಣಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಪ್ರಯತ್ನ ವಿಫಲವಾಗಿದೆಯೇ..?

    View Results

    Loading ... Loading ...