alex Certify
ಕನ್ನಡ ದುನಿಯಾ       Mobile App
       

Kannada Duniya

ಕೋರ್ ಕಮಿಟಿಯಿಂದ ಶೋಭಾ ಕರಂದ್ಲಾಜೆ ಔಟ್

SHOBHA-KARANDLAJE ckm

ಬೆಂಗಳೂರು: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು, 22 ಮಂದಿಯ ಹೆಸರನ್ನು ಕೋರ್ ಕಮಿಟಿಗೆ ನೇಮಕ ಮಾಡಲು ಸಲ್ಲಿಸಿದ್ದು, ಈ ಸಮಿತಿಯಿಂದ ಲೋಕಸಭೆ ಸದಸ್ಯೆ ಶೋಭಾ ಕರಂದ್ಲಾಜೆ ಅವರನ್ನು ಕೈಬಿಡಲಾಗಿದೆ ಎನ್ನಲಾಗಿದೆ.

ಪಕ್ಷದ ಪದಾಧಿಕಾರಿಗಳ ನೇಮಕ ವಿಚಾರದಲ್ಲಿ ಯಡಿಯೂರಪ್ಪನವರು ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿ, ದೆಹಲಿವರೆಗೂ ಹೋಗಿ ಪಕ್ಷದ ನಾಯಕರಿಗೆ ದೂರು ನೀಡಿದ್ದರು. ಅಲ್ಲದೇ, ಆರ್.ಎಸ್.ಎಸ್. ನಾಯಕರಿಗೂ ಮಾಹಿತಿ ನೀಡಲಾಗಿತ್ತೆನ್ನಲಾಗಿದೆ. ಈ ಬೆಳವಣಿಗೆಗಳ ನಂತರ ಬಿ.ಜೆ.ಪಿ. ವರಿಷ್ಠರು, ರಾಜ್ಯ ಬಿ.ಜೆ.ಪಿ. ಕೋರ್ ಕಮಿಟಿಗೆ ಪದಾಧಿಕಾರಿಗಳನ್ನು ನೇಮಕ ಮಾಡಿದ್ದಾರೆ.

ಅದರಂತೆ ಶೋಭಾ ಕರಂದ್ಲಾಜೆ ಮತ್ತು ರವಿಕುಮಾರ್ ಅವರನ್ನು ಹೊರಗಿಡಲಾಗಿದೆ. ಬಿ.ಎಸ್.ಯಡಿಯೂರಪ್ಪ, ಅನಂತಕುಮಾರ್, ಡಿ.ವಿ.ಸದಾನಂದಗೌಡ, ಕೆ.ಎಸ್.ಈಶ್ವರಪ್ಪ, ಜಗದೀಶ್ ಶೆಟ್ಟರ್, ಪ್ರಹ್ಲಾದ್ ಜೋಶಿ, ಸಿ.ಟಿ.ರವಿ, ಗೋವಿಂದ ಕಾರಜೋಳ, ಆರ್.ಅಶೋಕ್, ಅರವಿಂದ್ ಲಿಂಬಾವಳಿ, ಸಿ.ಎಂ.ಉದಾಸಿ ಮೊದಲಾದವರು ಕೋರ್ ಕಮಿಟಿಯಲ್ಲಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...