alex Certify
ಕನ್ನಡ ದುನಿಯಾ       Mobile App
       

Kannada Duniya

ನಾಳೆ ಬಾದಾಮಿಯಲ್ಲಿ ಸಿ.ಎಂ. ನಾಮಪತ್ರ ಸಲ್ಲಿಕೆ

ಮುಖ್ಯಮಂತ್ರಿ ಸಿದ್ಧರಾಮಯ್ಯ 2 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಕುರಿತಾದ ಗೊಂದಲಕ್ಕೆ ತೆರೆ ಬಿದ್ದಿದ್ದು, ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಬಾದಾಮಿಯಿಂದಲೂ ಸ್ಪರ್ಧಿಸಲಿದ್ದಾರೆ.

ಮೊದಲಿಗೆ ಕಾಂಗ್ರೆಸ್ ಹೈಕಮಾಂಡ್ 2 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ನೀಡಿರಲಿಲ್ಲ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆ.ಡಿ.ಎಸ್., ಬಿ.ಜೆ.ಪಿ. ನಾಯಕರು ಸಿ.ಎಂ. ಸೋಲಿಸಲು ಕಾರ್ಯತಂತ್ರ ರೂಪಿಸಿದ್ದು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ಸುಲಭವಾಗಿಲ್ಲ ಎನ್ನುವ ಕಾರಣಕ್ಕೆ ಸಿ.ಎಂ. ಬಾದಾಮಿ ಕ್ಷೇತ್ರದಿಂದಲೂ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ಏಪ್ರಿಲ್ 23 ರಂದು ಬಾದಾಮಿಗೆ ತೆರಳಲಿರುವ ಸಿ.ಎಂ. ನಾಮಪತ್ರ ಸಲ್ಲಿಸಲಿದ್ದಾರೆ. ಬಾದಾಮಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ್ದರೂ, ಬಿ ಫಾರಂ ನೀಡಿರಲಿಲ್ಲ. ಸಿ.ಎಂ. ಸ್ಪರ್ಧಿಸಿದರೆ ಸ್ಪರ್ಧಿಸಲಿ, ಇಲ್ಲವೇ ತಮಗೇ ಟಿಕೆಟ್ ಕೊಡಬೇಕೆಂದು ಶಾಸಕ ಚಿಮ್ಮನಕಟ್ಟಿ ಅವರು ಪಟ್ಟು ಹಿಡಿದಿದ್ದರು.

ಸಿ.ಎಂ.ಗೆ ಉತ್ತರ ಕರ್ನಾಟಕದ ಬಾದಾಮಿಯಲ್ಲಿ ಸ್ಪರ್ಧೆಗೆ ಅವಕಾಶ ನೀಡಬೇಕೆಂದು ಒತ್ತಡ ಕೇಳಿ ಬಂದ ಹಿನ್ನಲೆಯಲ್ಲಿ ಹೈಕಮಾಂಡ್ ಸ್ಪರ್ಧೆಗೆ ಅವಕಾಶ ನೀಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...