alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಗದ ಬಿ.ಜೆ.ಪಿ. ಟಿಕೆಟ್, ಸೊಗಡು ಶಿವಣ್ಣ ನಡೆ ಇಂದು ನಿರ್ಧಾರ

ತುಮಕೂರು: ಮಾಜಿ ಸಚಿವ ಸೊಗಡು ಶಿವಣ್ಣ ಅವರಿಗೆ ಬಿ.ಜೆ.ಪಿ. ಟಿಕೆಟ್ ತಪ್ಪಿದ್ದು, ಮಾಜಿ ಸಂಸದ ಜಿ.ಎಸ್. ಬಸವರಾಜು ಪುತ್ರ ಜ್ಯೋತಿ ಗಣೇಶ್ ಗೆ ಅವಕಾಶ ನೀಡಲಾಗಿದೆ.

ತುಮಕೂರು ನಗರ ಕ್ಷೇತ್ರಕ್ಕೆ ಸೊಗಡು ಶಿವಣ್ಣ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಟಿಕೆಟ್ ಕೈ ತಪ್ಪಿದ್ದರಿಂದ ಅವರು ಅಸಮಾಧಾನಗೊಂಡಿದ್ದು, ಬೆಂಬಲಿಗರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ.

ತುಮಕೂರು ಕ್ಷೇತ್ರದಲ್ಲಿ ಬಿ.ಜೆ.ಪಿ. ಗೆಲುವಿಗೆ ಸೊಗಡು ಶಿವಣ್ಣ ಅಡ್ಡಿಯಾಗುವ ಸಾಧ್ಯತೆ ಇದೆ. ಜೆ.ಡಿ.ಎಸ್. ಪಕ್ಷದಿಂದ ಶಿವಣ್ಣ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.

ಬಿ.ಜೆ.ಪಿ. ಟಿಕೆಟ್ ಸಿಗದ ಹಿನ್ನಲೆಯಲ್ಲಿ ಸೊಗಡು ಶಿವಣ್ಣ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಬಂಡಾಯ ಸ್ಪರ್ಧೆಗೆ ಒತ್ತಡ ಹೇರಿದ್ದಾರೆ. ಬೆಂಬಲಿಗರ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...