alex Certify
ಕನ್ನಡ ದುನಿಯಾ       Mobile App
       

Kannada Duniya

ಈಗ ಕರ್ನಾಟಕದತ್ತ ಮೋದಿ, ಶಾ ಚಿತ್ತ

bsy-kar

ಬೆಂಗಳೂರು : ಮುಂದಿನ ಚುನಾವಣೆಗಳಿಗೆ ದಿಕ್ಸೂಚಿ ಎಂದೇ ಪರಿಗಣಿಸಲಾಗಿದ್ದ, ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿ.ಜೆ.ಪಿ. ಯಶಸ್ಸು ಗಳಿಸಿದೆ.

ಉತ್ತರ ಪ್ರದೇಶ, ಉತ್ತರಾಖಂಡ್ ನಲ್ಲಿ ಪೂರ್ಣ ಬಹುಮತದತ್ತ ಬಿ.ಜೆ.ಪಿ. ಹೆಜ್ಜೆ ಇಟ್ಟಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಂಜಾಬ್ ನಲ್ಲಿ ಅಧಿಕಾರಕ್ಕೇರಲಿದೆ.

ಇದೆಲ್ಲಾ ಆದ ನಂತರ ಪ್ರಧಾನಿ ನರೇಂದ್ರ ಮೋದಿ, ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜೋಡಿ ಕರ್ನಾಟಕದತ್ತ ಗಮನ ಹರಿಸಲಿದೆ ಎನ್ನಲಾಗಿದೆ. ಮುಂದಿನ ವರ್ಷ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದ್ದು, ದಕ್ಷಿಣ ಭಾರತದಲ್ಲಿ ಬಿ.ಜೆ.ಪಿ.ಯ ಪ್ರಬಲ ನೆಲೆಯಾಗಿರುವ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಕಾರ್ಯತಂತ್ರ ರೂಪಿಸಲಿದ್ದಾರೆ.

ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಅಮಿತ್ ಶಾ ಮುಂದಾಗಿದ್ದಾರೆ.

ಈಗಾಗಲೇ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ 150 ಸ್ಥಾನಗಳೊಂದಿಗೆ ಪಕ್ಷವನ್ನು ಅಧಿಕಾರಕ್ಕೆ ತರುವುದಾಗಿ ಹೇಳಿದ್ದಾರೆ. ಪಂಚರಾಜ್ಯಗಳ ಫಲಿತಾಂಶ ಬಿ.ಜೆ.ಪಿ.ಗೆ ಹೊಸ ಹುಮ್ಮಸ್ಸು ಮೂಡಿಸಿದ್ದು, ಮುಂದಿನ ಚುನಾವಣೆಗೆ ಪಕ್ಷವನ್ನು ಅಧಿಕಾರಕ್ಕೆ ತರಲು ಮೋದಿ, ಶಾ ಜೋಡಿ ಯೋಜಿಸಿದೆ.

ದಕ್ಷಿಣದ ರಾಜ್ಯಗಳಲ್ಲಿ ಬಿ.ಜೆ.ಪಿ.ಯನ್ನು ಸಂಘಟಿಸಲು ಕರ್ನಾಟಕದಲ್ಲಿ ಆಡಳಿತಕ್ಕೇರಬೇಕೆಂಬುದನ್ನು ಮನಗಂಡಿರುವ ನಾಯಕರು, ತಮ್ಮ ನೋಟವನ್ನು ರಾಜ್ಯದತ್ತ ಹರಿಸಿದ್ದು, ಮುಂದಿನ ದಿನಗಳಲ್ಲಿ ಕ್ಯಾಂಪ್ ಹಾಕಿ ಗೇಮ್ ಪ್ಲಾನ್ ರೂಪಿಸಲಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...