alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಜೆ.ಪಿ. ಯಾತ್ರೆಯಲ್ಲಿ ಆಘಾತಕಾರಿ ಘಟನೆ

ತುಮಕೂರು: ಬಿ.ಜೆ.ಪಿ. ನಿನ್ನೆಯಿಂದ ನವ ಕರ್ನಾಟಕ ಪರಿವರ್ತನಾ ಯಾತ್ರೆ ಆರಂಭಿಸಿದ್ದು, 2 ನೇ ದಿನವೇ ಆಘಾತಕಾರಿ ಘಟನೆ ನಡೆದಿದೆ.

ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಬಾಣಸಂದ್ರದಲ್ಲಿ ಯಾತ್ರೆಯ ವಾಹನದ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಬಿ.ಜೆ.ಪಿ.ಯಿಂದ 4 ದಿನಗಳ ಹಿಂದಷ್ಟೇ ಪ್ರಮುಖ ಮುಖಂಡರೊಬ್ಬರನ್ನು ಉಚ್ಛಾಟನೆ ಮಾಡಲಾಗಿದ್ದು, ಇದರಿಂದ ಆಕ್ರೋಶಗೊಂಡ ಅವರ ಬೆಂಬಲಿಗರು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರಿಗೆ ದೂರು ನೀಡಲು ಮುಂದಾಗಿದ್ದಾರೆ.

ಬಿ.ಎಸ್.ವೈ. ಅವರ ಕಾರ್ ತಡೆದು ದೂರು ನೀಡಲು ಮುಂದಾದ ಸಂದರ್ಭದಲ್ಲಿ ಇದನ್ನು ಗಮನಿಸದ ಯಡಿಯೂರಪ್ಪ ಮುಂದೆ ಸಾಗಿದ್ದಾರೆ. ಆಗ ಆಕ್ರೋಶಗೊಂಡ ಕೆಲವರು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ, ಪರಿವರ್ತನಾ ಯಾತ್ರೆಯಲ್ಲಿದ್ದ ವಾಹನದ ಗಾಜಿಗೆ ಕಲ್ಲು ಬಿದ್ದು ಹಾನಿಯಾಗಿದೆ.

ಸ್ಥಳದಲ್ಲಿದ್ದ ಪೊಲೀಸರು ಉದ್ರಿಕ್ತರನ್ನು ಸ್ಥಳದಿಂದ ಚದುರಿಸಿದ್ದು, ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಬಳಿಕ ಯಾತ್ರೆ ಸಾಂಗವಾಗಿ ಮುಂದುವರೆದಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...