alex Certify
ಕನ್ನಡ ದುನಿಯಾ       Mobile App
       

Kannada Duniya

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 28 ಸ್ಥಾನ ಖಚಿತವೆಂದ ಮುರುಗೇಶ್ ನಿರಾಣಿ

ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಮುರುಗೇಶ್ ನಿರಾಣಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ರಾಜ್ಯದ ಎಲ್ಲ 28 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ ಮತ್ತು ಇದರಲ್ಲಿ ಯಶಸ್ವಿಯಾಗಲಿದ್ದೇವೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದವರು, ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗಿ ಒಪ್ಪಿಕೊಳ್ಳುವುದು ಕಷ್ಟವಿದೆ ಎಂದು ತಿಳಿಸಿದ ಮುರುಗೇಶ್ ನಿರಾಣಿ, ಕಾಂಗ್ರೆಸ್ಸಿನಲ್ಲಿ ಈಗಾಗಲೇ ಐದರಿಂದ ಆರು ಜನ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸ್ಥಾನದ ಸ್ಪರ್ಧೆಯಲ್ಲಿದ್ದಾರೆ. ಇವರಿಂದ ಕುಮಾರಸ್ವಾಮಿಯವರಿಗೆ ಮುಂದಿನ ದಿನಗಳಲ್ಲಿ ಸಹಕಾರ ಸಿಗುವುದು ಕಷ್ಟ ಎಂದು ತಿಳಿಸಿದ್ದಾರೆ.

ಕುಮಾರಸ್ವಾಮಿ ಅವರು ಈ ಹಿಂದೆ ಹೇಳಿದಂತೆ ರೈತರ ಸಾಲ ಮನ್ನಾ ಮಾಡಲಿ. ಇದರಲ್ಲಿ ಬಿಜೆಪಿ ರಾಜಕೀಯ ಮಾಡುವುದಿಲ್ಲ ಎಂದು ಹೇಳಿದ ಅವರು, ಯಾವುದೇ ಕಾರಣಕ್ಕೂ ಕುಮಾರಸ್ವಾಮಿಯವರು ತಮ್ಮ ಮಾತು ತಪ್ಪಬಾರದು ಎಂದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...