alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಎಸ್.ವೈ. ವಿರುದ್ಧ ಬಿ.ಜೆ.ಪಿ. ನಾಯಕರ ಸಭೆ

bjp

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಬಂಡಾಯದ ಕಹಳೆ ಮೊಳಗಿರುವಂತೆಯೇ, ಬಿ.ಜೆ.ಪಿ. ಯಲ್ಲಿಯೂ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಕಾರ್ಯವೈಖರಿಗೆ ಅತೃಪ್ತಿಗೊಂಡಿರುವ ಪಕ್ಷದ ನಾಯಕರು ಸಭೆ ಸೇರಲು ತೀರ್ಮಾನಿಸಿದ್ದಾರೆ.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಪಕ್ಷದ ಕಚೇರಿಯಲ್ಲಿಯೇ  ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಸಭೆ ನಡೆಸಲಾಗುತ್ತಿದೆ ಎನ್ನಲಾಗಿದೆ. ಈ ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಸಂಸದ ಪ್ರಹ್ಲಾದ್ ಜೋಶಿ, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ. ಯಡಿಯೂರಪ್ಪನವರು ರಾಜ್ಯಾಧ್ಯಕ್ಷರಾದ ನಂತರ ಹೊಸ ಪದಾಧಿಕಾರಿಗಳನ್ನು ನೇಮಿಸಿದ್ದಾರೆ.

ಅಲ್ಲದೇ, ಜಿಲ್ಲಾ ಸಮಿತಿಗೆ ನೂತನ ಅಧ್ಯಕ್ಷರನ್ನು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದ್ದು, ಈ ಸಂದರ್ಭದಲ್ಲಿ ಮುಖಂಡರೊಂದಿಗೆ ಚರ್ಚಿಸದೇ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಇಂದು ನಡೆಯಲಿರುವ ಸಭೆ ಮಹತ್ವ ಪಡೆದುಕೊಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...