alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಜೆ.ಪಿ. ಯಿಂದ ನವಕರ್ನಾಟಕ ಪರಿವರ್ತನಾ ಯಾತ್ರೆ

ನವದೆಹಲಿ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಬಿ.ಜೆ.ಪಿ. ಈಗಾಗಲೇ ಕಾರ್ಯೋನ್ಮುಖವಾಗಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ ಬಳಿಕ ಅನೇಕ ಬೆಳವಣಿಗೆ ನಡೆದಿವೆ. ಅಮಿತ್ ಶಾ ದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ರಾಜ್ಯ ಬಿ.ಜೆ.ಪಿ. ಕೋರ್ ಕಮಿಟಿ ಸಭೆ ನಡೆಸಿದ್ದು, ಎಲ್ಲಾ ನಾಯಕರು ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂದು ಸೂಚಿಸಿದ್ದಾರೆ.

ಸಂಘಟನೆಯಲ್ಲಿ ಸಮಸ್ಯೆಗಳನ್ನು ಸರಿಪಡಿಸಿಕೊಂಡು ಜಿಲ್ಲಾವಾರು ಸಭೆ ನಡೆಸಬೇಕು. ನವಕರ್ನಾಟಕ ಪರಿವರ್ತನಾ ಯಾತ್ರೆ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ.

ಸಭೆಯಲ್ಲಿ ಕೇಂದ್ರ ಸಚಿವರಾದ ಅನಂತ್ ಕುಮಾರ್, ಡಿ.ವಿ. ಸದಾನಂದಗೌಡ, ಪ್ರಕಾಶ್ ಜಾವಡೇಕರ್, ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ರಾಮ್ ಲಾಲ್, ಬಿ.ಎಲ್. ಸಂತೋಷ್, ಮುರಳೀಧರ ರಾವ್, ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ ಸೇರಿದಂತೆ ಕೋರ್ ಕಮಿಟಿಯ ಹಲವು ಪ್ರಮುಖರು ಪಾಲ್ಗೊಂಡಿದ್ದರು.

ಸಭೆಯ ಬಳಿಕ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧದ ಹೋರಾಟ ತೀವ್ರಗೊಳಿಸಲಾಗುವುದು. ಎಲ್ಲಾ 224 ಕ್ಷೇತ್ರಗಳಲ್ಲಿ ನವಕರ್ನಾಟಕ ಪರಿವರ್ತನಾ ಯಾತ್ರೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...