alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಜೆ.ಪಿ. ಪರಿವರ್ತನಾ ಯಾತ್ರೆಗೆ ಮೋದಿ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಬಿ.ಜೆ.ಪಿ. ರಣಕಹಳೆ ಮೊಳಗಿಸಿದ್ದು, ನವೆಂಬರ್ 1 ರಿಂದ 70 ದಿನಗಳ ಕಾಲ ನವ ಕರ್ನಾಟಕ ಪರಿವರ್ತನಾ ಯಾತ್ರೆ ಕೈಗೊಳ್ಳಲಾಗಿದೆ.

ಯಾತ್ರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದು, ಇದರೊಂದಿಗೆ ಮುಂದಿನ ವಿಧಾನಸಭೆ ಚುನಾವಣೆಗೆ ಬಿ.ಜೆ.ಪಿ. ಪ್ರಚಾರ ಆರಂಭವಾಗಲಿದೆ.

ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಯಾತ್ರೆ ನಡೆಯಲಿದ್ದು, ರಾಜ್ಯದ ಎಲ್ಲಾ 224 ವಿಧಾನಸಭೆ ಕ್ಷೇತ್ರಗಳಲ್ಲಿ ಸಂಚರಿಸಲಿದೆ.

ರಾಜ್ಯ ಸರ್ಕಾರದ ವೈಫಲ್ಯತೆ, ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ತಿಳಿಸುವ ಜೊತೆಗೆ ಪಕ್ಷದ ಬಲವರ್ಧನೆ ಉದ್ದೇಶವನ್ನು ಯಾತ್ರೆ ಹೊಂದಿದೆ.

ನವ ಕರ್ನಾಟಕ ಪರಿವರ್ತನಾ ಯಾತ್ರೆ ಉದ್ಘಾಟನೆಗೆ ಆಗಮಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಯಡಿಯೂರಪ್ಪ ಪತ್ರ ಬರೆದಿದ್ದಾರೆ.

ಮೋದಿ ಯಾತ್ರೆಗೆ ಚಾಲನೆ ನೀಡುವುದರೊಂದಿಗೆ ಮುಂದಿನ ಚುನಾವಣೆ ಪ್ರಚಾರಕ್ಕೆ ರಣಕಹಳೆ ಮೊಳಗಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...