alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ಬಿಜೆಪಿಯಲ್ಲಿ ಮತ್ತೆ ಭುಗಿಲೆದ್ದ ಭಿನ್ನಮತ

bjp-445ನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಪರಾಭವಗೊಂಡ ಬಳಿಕ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರ ಕಾರ್ಯವೈಖರಿ ಕುರಿತು ಅಸಮಾಧಾನ ಮತ್ತೊಮ್ಮೆ ಭುಗಿಲೆದ್ದಿದ್ದು, ಭಿನ್ನಮತೀಯರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರನ್ನು ಭೇಟಿಯಾಗಲು ತೀರ್ಮಾನಿಸಿದ್ದಾರೆಂದು ಹೇಳಲಾಗಿದೆ.

ಈ ಹಿಂದೆ ಅಸಮಾಧಾನ ತಲೆದೋರಿದ ಸಂದರ್ಭದಲ್ಲಿ ಪಕ್ಷದ ರಾಜ್ಯ ಪ್ರಮುಖರನ್ನು ನವದೆಹಲಿಗೆ ಕರೆಸಿಕೊಂಡಿದ್ದ ಕೇಂದ್ರ ವರಿಷ್ಟರು, ಕೆಲವೊಂದು ಸಲಹೆ-ಸೂಚನೆಗಳನ್ನು ನೀಡಿದ್ದು, ಆದರೆ ಯಡಿಯೂರಪ್ಪನವರು ಇದನ್ನು ಕಡೆಗಣಿಸಿ ಏಕಪಕ್ಷೀಯ ನಿರ್ಧಾರ ಕೈಗೊಳ್ಳುತ್ತಿದ್ದಾರೆಂಬ ಅಂಶ ಈಗ ಮತ್ತೊಮ್ಮೆ ಭಿನ್ನಮತ ಭುಗಿಲೇಳಲು ಕಾರಣವಾಗಿದೆ.

ಹೀಗಾಗಿ ಸಮಾನಮನಸ್ಕರು ಶೀಘ್ರದಲ್ಲೇ ಬೆಂಗಳೂರಿನಲ್ಲಿ ಸಭೆ ಸೇರಿ ಈ ಕುರಿತು ಚರ್ಚೆ ನಡೆಸಿ ಯಡಿಯೂರಪ್ಪನವರ ಏಕಪಕ್ಷೀಯ ತೀರ್ಮಾನಗಳ ಕುರಿತು ಪಕ್ಷದ ವರಿಷ್ಟರ ಗಮನಕ್ಕೆ ತರಲು ಮುಂದಾಗಿದ್ದಾರೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...