alex Certify
ಕನ್ನಡ ದುನಿಯಾ       Mobile App
       

Kannada Duniya

ಒಂದು ವಾರದಲ್ಲಿ ಎರಡೆರಡು ಬಾರಿ ವಿಶ್ವಾಸಮತ ಸಾಬೀತುಪಡಿಸಿದ ಏಕೈಕ ಸಿಎಂ ಯಡ್ಡಿ

ಭಾರತದ ರಾಜಕೀಯ ಇತಿಹಾಸದಲ್ಲಿ ಸಿಎಂ ಯಡಿಯೂರಪ್ಪ ದಾಖಲೆ ಬರೆದಿದ್ದಾರೆ. ಒಂದೇ ವಾರದಲ್ಲಿ ಎರಡೆರಡು ಬಾರಿ ವಿಶ್ವಾಸಮತಯಾಚನೆ ಮಾಡಿದ ಏಕೈಕ ಮುಖ್ಯಮಂತ್ರಿಯಾಗಿದ್ದಾರೆ. 2011ರಲ್ಲಿ 11 ಶಾಸಕರು ಹಾಗೂ 5 ಸ್ವತಂತ್ರ ಶಾಸಕರು ಬೆಂಬಲ ವಾಪಸ್ ಪಡೆದು ಯಡಿಯೂರಪ್ಪನವರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದರು. ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಯಡಿಯೂರಪ್ಪ ಒಂದೇ ವಾರದಲ್ಲಿ 2 ಬಾರಿ ವಿಶ್ವಾಸಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದರು.

ಮೊದಲ ವಿಶ್ವಾಸಮತವನ್ನು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅಸಂವಿಧಾನಿಕವೆಂದು ಘೋಷಣೆ ಮಾಡಿದ್ದರು. ಹಾಗಾಗಿ ಎರಡನೇ ಬಾರಿ ಯಡಿಯೂರಪ್ಪ ವಿಶ್ವಾಸಮತ ಸಾಬೀತುಪಡಿಸಬೇಕಾಯ್ತು. 106 ಮತಗಳನ್ನು ಗಳಿಸಿ ಅವ್ರು ವಿಶ್ವಾಸಮತ ಸಾಬೀತುಪಡಿಸಿದ್ದರು.

ಈಗ ಸಿಎಂ ಆಗಿ 55 ಗಂಟೆಯಲ್ಲಿ ಮತ್ತೆ ಯಡಿಯೂರಪ್ಪ ವಿಶ್ವಾಸಮತ ಸಾಬೀತುಪಡಿಸಬೇಕಾಗಿದೆ. 75 ವರ್ಷದ ಯಡಿಯೂರಪ್ಪ ಮೂರನೇ ಬಾರಿ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದರು. ಆದ್ರೆ ಇಂದು ಯಡಿಯೂರಪ್ಪ ಭವಿಷ್ಯ ನಿರ್ಧಾರವಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...