alex Certify
ಕನ್ನಡ ದುನಿಯಾ       Mobile App
       

Kannada Duniya

ಅರಮನೆ ಮೈದಾನದಲ್ಲಿಂದು ಬಿಜೆಪಿ ಕಾರ್ಯಕಾರಿಣಿ ಸಭೆ

ರಾಜ್ಯದ ಮೈತ್ರಿಕೂಟ ಸರ್ಕಾರದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿರುವ ಮಧ್ಯೆ, ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿರುವುದು ಕುತೂಹಲ ಮೂಡಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದಲ್ಲಿ ಈ ಸಭೆ ನಡೆಯಲಿದ್ದು, ಕೇಂದ್ರ ಸಚಿವರಾದ ಅನಂತಕುಮಾರ್, ಸದಾನಂದಗೌಡ, ರಮೇಶ್ ಜಿಗಜಿಣಗಿ, ಅನಂತ ಕುಮಾರ್ ಹೆಗಡೆ, ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ ಸೇರಿದಂತೆ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ.

ಈ ಸಭೆಯಲ್ಲಿ ಪ್ರಸಕ್ತ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಹಾಗೂ ಮುಂಬರುವ ಲೋಕಸಭಾ ಚುನಾವಣೆಗೆ ಕೈಗೊಳ್ಳಬೇಕಿರುವ ಸಿದ್ಧತೆಗಳ ಕುರಿತು ಚರ್ಚೆ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...