alex Certify
ಕನ್ನಡ ದುನಿಯಾ       Mobile App
       

Kannada Duniya

ವಿಧಾನಸೌಧದ ಬಳಿ ಬಿಎಂಟಿಸಿ ಬಸ್ ಸಂಚಾರ ನಿಷೇಧ

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಇಂದು ಅಧಿಕಾರಕ್ಕೆ ಬರುತ್ತಿದ್ದು, ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ವಿಧಾನಸೌಧದ ಮುಂಭಾಗದಲ್ಲಿ ಸಂಜೆ 4-30 ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಈ ಸಂಭ್ರಮದ ಗಳಿಗೆಗೆ ಸಾಕ್ಷಿಯಾಗಲು ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಲಕ್ಷಾಂತರ ಸಂಖ್ಯೆಯಲ್ಲಿ ಬೆಂಗಳೂರಿಗೆ ಧಾವಿಸಿದ್ದಾರೆ.

ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಈಗಾಗಲೇ ಸಕಲ ಸಿದ್ಧತೆ ನಡೆದಿದ್ದು, ಟ್ರಾಫಿಕ್ ಜಾಮ್ ಉಂಟಾಗಬಾರದೆಂಬ ಕಾರಣಕ್ಕೆ ವಿಧಾನಸೌಧ ಸುತ್ತಮುತ್ತ ಬಿಎಂಟಿಸಿ ಬಸ್ ಗಳ ಸಂಚಾರವನ್ನು ನಿಷೇಧಿಸಲಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ಬಸ್ಸುಗಳು ಬದಲಿ ಮಾರ್ಗದಲ್ಲಿ ಸಂಚರಿಸಲಿವೆ. ವಾಹನಗಳ ಪಾರ್ಕಿಂಗ್ ಗೂ ಸಂಚಾರಿ ಪೊಲೀಸರು ವಿವಿಧ ಸ್ಥಳ ನಿಗದಿಪಡಿಸಿದ್ದು, ಇದಕ್ಕಾಗಿ ಹಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...